ವಿದ್ಯುತ್ ಚಾಲಿತ ಬಸ್​​ ಮತ್ತು ಬಿಎಸ್-6 ಡೀಸೆಲ್ ಬಸ್​​​ಗಳಿಗೆ ಸಿಎಂ ಚಾಲನೆ 
ರಾಜ್ಯ

ಸಾರಿಗೆ, ಎಸ್ಕಾಂ ಸಂಸ್ಥೆಗಳ ಪುನಶ್ಚೇತನಕ್ಕೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ...

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹೊಸ ವಿನ್ಯಾಸ, ಉತ್ತಮ ಸೇವೆ ಹಾಗೂ ಸಂಪನ್ಮೂಲ ಸೃಜನೆಯ ಮೂಲಕ ಭಾರತದಲ್ಲಿಯೇ ನಂ. 1 ಸಾರಿಗೆ ಸಂಸ್ಥೆಯಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಹೇಳಿದ್ದಾರೆ.

ಇಂದು ಅವರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವತಿಯಿಂದ ಆಯೋಜಿಸಿರುವ ವಿದ್ಯುತ್ ಚಾಲಿತ ಬಸ್​​ ಮತ್ತು ಬಿಎಸ್-6 ಡೀಸೆಲ್ ಬಸ್​​​ಗಳಿಗೆ ವಿಧಾನಸೌಧದ ಪೂರ್ವದ್ವಾರದ ಬಳಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ದಿಸೆಯಲ್ಲಿ ಬಿಎಂಟಿಸಿಯ ಪ್ರಯತ್ನಗಳಿಗೆ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದರು.

ಸಾರಿಗೆ, ಎಸ್ಕಾಂ ಸಂಸ್ಥೆ ಪುನಶ್ಚೇತನಗೊಳಿಸುವುದು ಸರ್ಕಾರದ ಸಂಕಲ್ಪ
ಸಬ್ಸಿಡಿ ಆಧಾರದ ಮೇಲೆ ಸಾರಿಗೆ ಸಂಸ್ಥೆಗಳನ್ನು ನಡೆಸುವುದು ಕಷ್ಟಸಾಧ್ಯ. ಅದಕ್ಕಾಗಿ ರಾಜ್ಯದ ಎಲ್ಲ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸಲು ಸರ್ಕಾರದ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ಅವರ ನೇತೃತ್ವದಲ್ಲಿ ಒಂದು ಸಮಿತಿಯನ್ನು ರಚಿಸಲಾಗಿದೆ ಎಂದರು.

ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟಿ, ಸಂಪನ್ಮೂಲ ಸೃಜನೆಗೆ ಒತ್ತು ನೀಡಲು ಹಾಗೂ ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವ ಕುರಿತು ಈ ಸಮಿತಿ ತನ್ನ ಶಿಫಾರಸು ನೀಡಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಅಂತೆಯೇ ಎಸ್ಕಾಂಗಳ ಪುನಶ್ಚೇತನಕ್ಕೆ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ತಿಳಿಸಿದರು.

ಸಾರಿಗೆ ಹಾಗೂ ಎಸ್ಕಾಂಗಳು ಆರ್ಥಿಕವಾಗಿ ಸ್ವಾವಲಂಬನೆಯಾಗಿ ಜನರ ಸೇವೆ, ಸಂಸ್ಥೆ ಕಟ್ಟಲು ಹಾಗೂ ಸರಕಾರದ ಮೇಲೆ ಹೊರೆ ಕಡಿಮೆ ಮಾಡುವ ಉದ್ದೇಶದಿಂದ ಈ ಸಮಿತಿಗಳನ್ನು ರಚಿಸಲಾಗಿದೆ ಎಂದರು.

ಮಾಲಿನ್ಯ ರಹಿತ ಬಸ್ ಗಳು
ಬಿಎಸ್-6 ನಂತಹ ವಾಹನಗಳನ್ನು ಅಳವಡಿಸಿರುವುದು ಸಂತೋಷದ ವಿಷಯವಾಗಿದೆ. ಪರಿಸರ ಮಾಲಿನ್ಯ ಮುಕ್ತ 300 ವಿದ್ಯುತ್ ಚಾಲಿತ ಬಸ್‍ಗಳನ್ನು ಅಳವಡಿಸುವ ಗುರಿಯನ್ನು ಹೊಂದಿದ್ದು, ಪ್ರಸ್ತುತ 90 ಬಸ್ ಅಳವಡಿಸಲಾಗುತ್ತಿದೆ. ಇವುಗಳ ಸಂಚಾರದಿಂದ ಮಾಲಿನ್ಯ ತಪ್ಪುತ್ತದೆ ಎಂಬ ವಿಶ್ವಾಸವಿದೆ ಹಾಗೂ ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಬೇಕು ಎಂದು ಬೊಮ್ಮಾಯಿ ಅವರು ಮನವಿ ಮಾಡಿದರು.

ತಂತ್ರಜ್ಞಾನವನ್ನು ಮೇಲ್ದರ್ಜೆಗೇರಿಸಿ, ಜನಸ್ನೇಹಿಯಾಗಿಸುವ ಮುಖೇನ ಲಾಭದಾಯಕವಾಗುವಂತೆ ಮಾಡಬೇಕು. ಸಂಸ್ಥೆಗಳು ಆದಾಯದ ಸೋರಿಕೆಯನ್ನು ತಡೆದು ಸಂಪನ್ಮೂಲ ಕ್ರೋಢೀಕರಣಕ್ಕೆ ಹೆಚ್ಚಿನ ಗಮನ ನೀಡುವಂತೆ ತಿಳಿಸಿದರು.

ಸಮಿತಿಯ ಸಲಹೆಗಳನ್ನು ಜಾರಿಗೆ ತರುವ ಮೂಲಕ ಸಾರಿಗೆಗೆ ಹೊಸ ಆಯಾಮ ನೀಡುವ ಕೆಲಸ ಮಾಡಬೇಕು ಎಂದರು. ಹಿಂದೆ ಸಾರ್ವಜನಿಕ ಉದ್ದಿಮೆಗಳು ಹೆಚ್ಚಿನ ಪ್ರಮಾಣದಲ್ಲಿ ಬಿಎಂಟಿಸಿ ಸೇವೆ ಪಡೆಯುತ್ತಿದ್ದವು. ಮುಂದಿನ ದಿನಗಳಲ್ಲಿ ಹೆಚ್‍ಎಎಲ್-ಮತ್ತಿತರ ಸಾರ್ವಜನಿಕ ಉದ್ದಿಮೆಗಳು ಹಾಗೂ ಐಟಿ ಕಂಪನಿಗಳೊಂದಿಗೆ ಮಾತುಕತೆ ನಡೆಸಿ ಬಿಎಂಟಿಸಿ ಸೇವೆಯನ್ನು ಬಳಸುವ ಬಗ್ಗೆ ಮನವೊಲಿಸಲಾಗುವುದು ಎಂದರು.

ಹೊಸ ಪ್ರಯೋಗ ಮಾಡಿ ದಕ್ಷತೆ, ಕ್ಷಮತೆಯನ್ನು ಹೆಚ್ಚಿಸುವ ಮೂಲಕ ಸಾರಿಗೆ ಸಚಿವರ ನೇತೃತ್ವದಲ್ಲಿ ಅಧಿಕಾರಿಗಳು ಸಹಕಾರ ನೀಡಿದರೆ ಫಲಪ್ರದವಾಗುವುದು. ಬಿಎಂಟಿಸಿ ಬದಲಾಗಿ ಹೊಸ ವಿನ್ಯಾಸ ರೂಪಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT