ರಾಜ್ಯ

ರಾಜ್ಯದಲ್ಲಿ ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 269 ಸೇರಿ 356 ಮಂದಿಗೆ ಪಾಸಿಟಿವ್, 2 ಸಾವು!

Vishwanath S

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 356 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,05,232ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,318ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 269 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,61,997ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 347 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,429ಕ್ಕೆ ಏರಿಕೆಯಾಗಿದೆ. ಇನ್ನು 7,456 ಸಕ್ರಿಯ ಪ್ರಕರಣಗಳಿವೆ.

SCROLL FOR NEXT