ಹಾವೇರಿ: ಸತ್ತ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 80 ಶಾಲಾ ಮಕ್ಕಳು ಅಸ್ವಸ್ಥ
ಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಹಾವೇರಿ: ಸತ್ತ ಹಲ್ಲಿ ಬಿದ್ದ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಪ್ರಾಥಮಿಕ ಶಾಲೆಯ ಸುಮಾರು 80 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಈ ಘಟನೆ ನಡೆದಿದ್ದು, ಅಸ್ವಸ್ಥ ಮಕ್ಕಳನ್ನು ರಾಣಿಬೆನ್ನೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ಚಿಕಿತ್ಸೆ ನಂತರ ಮಕ್ಕಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಘಟನೆ ಬೆಳಕಿಗೆ ಬಂದ ನಂತರ ಶಾಲೆಯ ವಿರುದ್ದ ಕಠಿಣ ಕ್ರಮಕ್ಕೆ ಪೋಷಕರು ಆಗ್ರಹಿಸಿದ್ದಾರೆ. ಈ ಘಟನೆಗೆ ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಡಳಿತವು ಅಧಿಕಾರಿಗಳಿಗೆ ಸೂಚನೆ ನೀಡಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.