ರಾಜ್ಯ

ಬೆಂಗಳೂರು ಬಾಂಬ್ ಸ್ಫೋಟ ಪ್ರಕರಣ: ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ 'ಹೈ' ನಕಾರ

Manjula VN

ಬೆಂಗಳೂರು: ನಗರದಲ್ಲಿ ಸರಣಿ ಬಾಂಬ್ ಸ್ಫೋಟ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಪ್ರಕರಣ ರದ್ದತಿಗೆ ಹೈಕೋರ್ಟ್ ಏಕಸದಸ್ಯ ಪೀಠ ಸೋಮವಾರ ನಿರಾಕರಿಸಿದೆ.

ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದವರ ಕೇಸ್ ರದ್ದತಿಗೆ ನಕಾರ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತರೆಂದು ಹೇಳಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಆರೋಪ ಈ ಹಿಂದೆ ಕೇಳಿಬಂದಿತ್ತು. ಅಬ್ದುಲ್‌ನಾಸಿರ್ ಮದನಿ ವಿರುದ್ಧ ಸಾಕ್ಷ್ಯ ಹೇಳದಂತೆ ಬೆದರಿಕೆ ಹೇರಲಾಗಿತ್ತು.

ಕೆ.ಕೆ.ಶಹೀನಾ, ಸುಬೇರ್ ಪಡುಪು, ಉಮ್ಮರ್ ಮೌಲ್ವಿ ಬೆದರಿಕೆ ಹಾಕಿದ್ದರು. ಸಾಕ್ಷಿಗಳ ಸಂದರ್ಶನ ನೆಪದಲ್ಲಿ ಬೆದರಿಕೆ ಆರೋಪ ಹಾಕಲಾಗಿತ್ತು.

ಈ ಸಂಬಂಧ ಕೊಡಗಿನ ಯೋಗಾನಂದ್, ರಫೀಕ್ ಅವರು ಎರಡು ಪ್ರತ್ಯೇಕ ದೂರು ದಾಖಲಿಸಿದ್ದ‌ರು. ಇದರಂತೆ ಪ್ರಕರಣದಿಂದ ಕೈಬಿಡುವಂತೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ.

SCROLL FOR NEXT