ಎಡಿಜಿಪಿ ಭಾಸ್ಕರ್ ರಾವ್ 
ರಾಜ್ಯ

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಅರ್ಜಿಯನ್ನು ಸರ್ಕಾರ ಅನುಮೋದಿಸಿದ್ದು, ಡಿಸೆಂಬರ್ 31 ರಂದು ಸ್ವಯಂ ನಿವೃತ್ತಿ ಹೊಂದಲಿದ್ದಾರೆಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ಭಾಸ್ಕರ್ ರಾವ್ ಅವರೇ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದು, ತಮ್ಮ ಸ್ವಯಂ ನಿವೃತ್ತಿ ಮನವಿಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿರುವ ಭಾಸ್ಕರ್ ರಾವ್ ಅವರು ಮುಂಬರುವ ದಿನಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆಂದು ಕೆಲ ಸುದ್ದಿಗಳು ಪ್ರಕಟಗೊಂಡಿದ್ದವು.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಭಾಸ್ಕರ್ ರಾವ್ ಅವರು, ಟ್ರಾವೆಲ್ ಮಾಡಲು ಬಯಸಿದ್ದೇನೆ. ನನ್ನ ಕುಟುಂಬಸ್ಥರೊಂದಿಗೆ ಸಮಯ ಕಳೆಯುವುದು, ಪಾಠ ಹೇಳಿಕೊಡುವುದರೊಂದಿಗೆ ಕಾಲ ಕಳೆಯಲು ಬಯಸಿದ್ದೇನೆಂದು ಹೇಳಿದ್ದಾರೆ.

1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಎಡಿಜಿಪಿ ಸಂಜಯ್ ಸಹಾಯ್ ಅವರೂ ಸ್ವಯಂ ನಿವೃತ್ತಿ ಪಡೆದಿದ್ದರು.

ರಾವ್  ಅವರು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಸೇವೆಯಿಂದ ಸ್ವಯಂ ನಿವೃತ್ತಿಗೆ (VRS) ಅರ್ಜಿ ಸಲ್ಲಿಸಿದ್ದರು. ಕೂಡಲೇ ಅನುಮೋದನೆ ನೀಡಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. ಅವರ ಕಡತ ಮುಖ್ಯಮಂತ್ರಿ ಬಳಿ ಬಾಕಿ ಉಳಿದಿದ್ದು, ಇತ್ತೀಚೆಗಷ್ಟೇ ಅವರು ಸಹಿ ಹಾಕಿದ್ದಾರೆಂದು ತಿಳಿದುಬಂದಿದೆ.

ರಾವ್ ಅವರ ನಿವೃತ್ತಿಯೊಂದಿಗೆ, ಎಡಿಜಿಪಿ ಶ್ರೇಣಿಯ ಎರಡನೇ ಹುದ್ದೆ ರಾಜ್ಯದಲ್ಲಿ ಖಾಲಿ ಬೀಳಲಿದೆ. ಎಡಿಜಿ, ಸಂವಹನ, ಲಾಜಿಸ್ಟಿಕ್ಸ್ ಮತ್ತು ಆಧುನೀಕರಣದ ಹುದ್ದೆ ಖಾಲಿ ಇದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಯೂ ಎಡಿಜಿಪಿ ಶ್ರೇಣಿಯದ್ದಾಗಿದೆ.

ಎಡಿಜಿಪಿ ಆಗಲಿರುವ 3 ಅಧಿಕಾರಿಗಳು!
1990 ಐಪಿಎಸ್ ಬ್ಯಾಚ್‌ನ ಈಗಿನ ಕಮಿಷನರ್ ಕಮಲ್ ಪಂತ್, ಆಗಿನ ಡಿಜಿಪಿ, ಪಿಕೆ ಗಾರ್ಗ್ ಅವರ ನಿವೃತ್ತಿಯ ನಂತರ ಈ ವರ್ಷದ ಏಪ್ರಿಲ್‌ನಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (DGP) ಬಡ್ತಿ ಪಡೆದರು. ಪೊಲೀಸ್ ಮಹಾನಿರೀಕ್ಷಕ (IGP) ಶ್ರೇಣಿಯ ಮೂವರು ಅಧಿಕಾರಿಗಳು — ಎಸ್ ಮುರುಗನ್, ಹೆಚ್ಚುವರಿ ಪೊಲೀಸ್ ಕಮಿಷನರ್ (ಪೂರ್ವ), ಕೆ.ವಿ.ಶರತ್ಚಂದ್ರ, ಅಪರಾಧ ತನಿಖಾ ಇಲಾಖೆ (ಸಿಐಡಿ), ಮತ್ತು ಎಂ.ನಂಜುಂಡಸ್ವಾಮಿ, ಕಾರಾಗೃಹ ಇಲಾಖೆಯಲ್ಲಿದ್ದಾರೆ – ಡಿಸೆಂಬರ್ 31 ರಂದು ಎಡಿಜಿಪಿಗಳಾಗಿ ಬಡ್ತಿ ನೀಡಲು ನಿರ್ಧರಿಸಲಾಗಿದೆ.

ಉಪ ಪೊಲೀಸ್ ಮಹಾನಿರೀಕ್ಷಕ (ಡಿಐಜಿಪಿ) ಶ್ರೇಣಿಯ ನಾಲ್ವರು ಅಧಿಕಾರಿಗಳು - ಜಂಟಿ ಆಯುಕ್ತ (ಅಪರಾಧ) ಸಂದೀಪ್ ಪಾಟೀಲ್, ಹುಬ್ಬಳ್ಳಿ- ಧಾರವಾಡ ಆಯುಕ್ತ ಲಾಭು ರಾಮ್, ಆಯುಕ್ತರು, ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ, ಪಿಎಸ್ ಹರ್ಷ ಮತ್ತು ಎಂಡಿ, ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ (MSIL) , ವಿಕಾಶ್ ಕುಮಾರ್ ವಿಕಾಶ್ Dbjg ಐಜಿಪಿ ಹುದ್ದೆಗೆ ಬಡ್ತಿ ಪಡೆಯುವುದು ಬಾಕಿಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್, ನದಿ ಪಾತ್ರದಲ್ಲಿ ಕಟ್ಟೆಚ್ಚರ

ನಿನ್ನ ತಲೆ ಕಡಿತೀವಿ: ಈದ್ ಮೆರವಣಿಗೆ ವೇಳೆ ಪುನೀತ್ ಕೆರೆಹಳ್ಳಿ ವಿರುದ್ಧ ಘೋಷಣೆ, ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ!

Chandra Grahan 2026: ವರ್ಷದ ಕೊನೆಯ ಸುದೀರ್ಘ ಚಂದ್ರಗ್ರಹಣ; ಭಾರತದಲ್ಲಿ ಸೂತಕ ಕಾಲ ಇಲ್ಲ, ಯಾಕೆ ಗೊತ್ತ?

2ನೇ ಟೆಸ್ಟ್ ಗೆಲುವಿನ ಹಾದಿಯಲ್ಲಿ ಟೀಂ ಇಂಡಿಯಾ; ಶ್ರೀಲಂಕಾ ವಿರುದ್ಧ ಭಾರತ ಗೆದ್ದರೆ WTC ಅಂಕಪಟ್ಟಿಯಲ್ಲಿ ಮಹತ್ತರ ಬದಲಾವಣೆ!