ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ದೈವಸ್ಥಾನ ಸೇರಿ 18 ಪೂಜಾ ಸ್ಥಳಗಳ ಅಪವಿತ್ರ ಪ್ರಕರಣ, 62 ವರ್ಷದ ವ್ಯಕ್ತಿಯ ಬಂಧನ!

ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು: ದೈವಸ್ಥಾನಗಳು ಮತ್ತು ವಿವಿಧ ಧರ್ಮಗಳ 18 ಪೂಜಾ ಸ್ಥಳಗಳನ್ನು ಅಪವಿತ್ರಗೊಳಿಸಿದ ಆರೋಪದ ಮೇಲೆ 62 ವರ್ಷದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.

ಕೋಟೆಕಾರು ಕೊಂಡಾಣ ನಿವಾಸಿ ದೇವದಾಸ್ ದೇಸಾಯಿಯನ್ನು ಬುಧವಾರ ಬಂಧಿಸಲಾಗಿದೆ. ಆರೋಪಿ ಮೂಲತಃ ಹುಬ್ಬಳ್ಳಿ ಮೂಲದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಆರೋಪಿ ತಂದೆ ಜಾನ್ ದೇಸಾಯಿ, ಸರ್ಕಾರಿ ಉದ್ಯೋಗಿಯಾಗಿದ್ದು,  ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಮತ್ತು ದೇವದಾಸ್ ಕೂಡ ಅದೇ ಧರ್ಮವನ್ನು ಅನುಸರಿಸುತ್ತಿದ್ದರು ಮತ್ತು ಅವರು ಮನೆಯಲ್ಲಿ ಪ್ರಾರ್ಥನೆ ಮಾಡುತ್ತಿದ್ದರು. ದೈವಸ್ಥಾನಗಳು, ಸಿಖ್ ಗುರುದ್ವಾರ ಮತ್ತು ಉಳ್ಳಾಲದ ಮಸೀದಿಯಲ್ಲಿ ಆಕ್ಷೇಪಾರ್ಹ ವಸ್ತುಗಳನ್ನು ಎಸೆದ ಅಪರಾಧವನ್ನು ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಕಮಿಷನರ್ ತಿಳಿಸಿದ್ದಾರೆ.

ಆರೋಪಿ ದೇವದಾಸ್ 1997ರಲ್ಲಿ ಉದ್ಯೋಗ ಅರಸಿ ಮಂಗಳೂರಿಗೆ ಬಂದಿದ್ದು,  ಬಂದರ್‌ ಸಾರಿಗೆ ಕಚೇರಿಯಲ್ಲಿ ಚಾಲಕನಾಗಿ ಕೆಲಸಕ್ಕೆ ಸೇರಿದ್ದ. ಕೌಟುಂಬಿಕ ಸಮಸ್ಯೆಯಿಂದ ಪತ್ನಿ ಹಾಗೂ ಮಗಳು ಅವರನ್ನು ತೊರೆದಿದ್ದು, 2006 ರಲ್ಲಿ ತಲಪಾಡಿ ಕೆಸಿ ರೋಡ್‌ನಲ್ಲಿ ಮನೆ ಖರೀದಿಸಿ ಅಲ್ಲಿಯೇ ವಾಸಿಸುತ್ತಿದ್ದಾಗಿ ಕಮಿಷನರ್  ಶಶಿಕುಮಾರ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT