ರಾಜ್ಯ

ನಾಳೆ ಕರ್ನಾಟಕ ಬಂದ್ ಇಲ್ಲ; ಕನ್ನಡಪರ ಸಂಘಟನೆಗಳ ಜೊತೆ ಮುಖ್ಯಮಂತ್ರಿ ಬೊಮ್ಮಾಯಿ ಸಂಧಾನ ಯಶಸ್ವಿ

Nagaraja AB

ಬೆಂಗಳೂರು: ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಿಸಿವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಾಪಸ್ ಪಡೆಯಲಾಗಿದೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವಿಧ ಕನ್ನಡಪರ ಸಂಘಟನೆಗಳ ಮುಖಂಡರೊಂದಿಗೆ ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ನಾಳಿನ ಬಂದ್ ಕೈಬಿಡುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಮುಖಂಡರು ನಾಳಿನ ಬಂದ್ ಆಚರಣೆಯನ್ನು ಹಿಂಪಡೆದಿದ್ದು, ಮತ್ತೊಂದು ದಿನಾಂಕ ನಿಗದಿಪಡಿಸಿದ್ದಾರೆ.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಾಳಿನ ಬಂದ್ ವಾಪಸ್ ಪಡೆಯಲು ವಾಟಾಳ್ ನಾಗರಾಜ್ ಮತ್ತು ಸಾ. ರಾ. ಗೋವಿಂದ್ ಸ್ಪಂದಿಸಿದ್ದು, ಅವರಿಗೆ ಧನ್ಯವಾದಗಳು ಎಂದರು.

ವಾಟಾಳ್ ನಾಗರಾಜ್ ಮಾತನಾಡಿ, ಸಿಎಂ ಮನವಿ ಮೇರೆಗೆ ನಾವೆಲ್ಲಾ ಒಂದು ತೀರ್ಮಾನಕ್ಕೆ ಬಂದಿದ್ದೇವೆ. ಹೊಸ ವರ್ಷಕ್ಕೆ ತೊಂದರೆಯಾಗಲಿದೆ. ಅದು ಸರಿಯಿಲ್ಲ ಎಂಬುದಾಗಿ ನಿರ್ಧಾರ ತೆಗೆದುಕೊಂಡಿದ್ದು, ನಾಳಿನ ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದರು. ಮುಂದಿನ ಬಂದ್ ದಿನಾಂಕ ಕುರಿತು ಇನ್ನೂ ಎರಡು ಮೂರು ದಿನಗಳಲ್ಲಿ ಸಭೆ ಕರೆದು ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು. 

SCROLL FOR NEXT