ಕೊರೋನಾ ಸೋಂಕು ಪತ್ತೆ ಪರೀಕ್ಷೆ (ಸಂಗ್ರಹ ಚಿತ್ರ) 
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಕೆ: ಬೆಂಗಳೂರಿನಲ್ಲಿ 565 ಸೇರಿ ಇಂದು 707 ಮಂದಿಗೆ ಪಾಸಿಟಿವ್, 3 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು 3 ಮಂದಿ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,327ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು ಕೋವಿಡ್-19 ಸೋಂಕಿತರ ಸಂಖ್ಯೆ 500 ನ್ನು ದಾಟಿದ್ದು 565 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,62,962ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ ಕೊರೋನಾದಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ. 

ರಾಜ್ಯದಲ್ಲಿ ಇಂದು 252 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,59,926ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳು 8223 ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

Video: 'ಕಾಂತಾರ' ಕೆಂಗಣ್ಣಿಗೆ ಗುರಿ, ಬಾಲಿವುಡ್​ನಿಂದ ಬ್ಯಾನ್; ಚಾಮುಂಡೇಶ್ವರಿಗೆ ತಲೆಬಾಗಿ ಕ್ಷಮೆಯಾಚಿಸಿದ ರಣವೀರ್ ಸಿಂಗ್!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ಮಾಜಿ ಸಿಎಂ ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್; 12 TMC ಸಂಸದರು BJP ಸೇರ್ಪಡೆ!

ಥೇಟ್ 'ಡೊನಾಲ್ಡ್ ಟ್ರಂಪ್' ರೀತಿಯ ಅಪರೂಪದ ಎಮ್ಮೆ! ನೋಡಲು ಮುಗಿಬಿದ್ದ ಜನರು, Video ವೈರಲ್

SCROLL FOR NEXT