ರಾಜ್ಯ

ಅಯೋಧ್ಯೆ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ: ಸಿಎಂ ಬೊಮ್ಮಾಯಿ

Sumana Upadhyaya

ಹುಬ್ಬಳ್ಳಿ: ಕೊಪ್ಪಳ ಜಿಲ್ಲೆಯ ಆನೆಗುಂಡಿ ಬಳಿಯಿರುವ ಅಂಜನಾದ್ರಿ ಬೆಟ್ಟವನ್ನು ಉತ್ತರ ಪ್ರದೇಶದ ಅಯೋಧ್ಯೆಯ ಶ್ರೀರಾಮ ಮಂದಿರ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಸರ್ಕಾರ ಸದ್ಯದಲ್ಲಿಯೇ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ. 

ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ ಎಂದು ನಂಬಲಾಗಿದೆ. ಹುಬ್ಬಳ್ಳಿಯಲ್ಲಿ ನಡೆದ ಎರಡು ದಿನಗಳ ರಾಜ್ಯ ಬಿಜೆಪಿ ಕಾರ್ಯಕಾರಿಣಿಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಕಟ್ಟಲಾಗಿದೆ. ರಾಮನ ಪರಮ ಭಕ್ತ ಹನುಮನ ಜನ್ಮಸ್ಥಳ ನಮ್ಮ ರಾಜ್ಯದಲ್ಲಾಗಿದೆ. ಹೀಗಾಗಿ ಸರ್ಕಾರ, ಜನಪ್ರಿಯತೆಯಿಂದ ಕರೆಯಲ್ಪಡುವ ಕಿಷ್ಕಿಂದೆಯನ್ನು ಅಂಜನಾದ್ರಿ ಬೆಟ್ಟವನ್ನು ಅಭಿವೃದ್ಧಿಪಡಿಸಲು ಮುಂದಾಗಿದೆ ಎಂದರು.

ಇದೇ ವೇಳೆ, ದತ್ತಿ ಇಲಾಖೆ ಒಡೆತನದ ದೇವಸ್ಥಾನಗಳಿಂದ ಸಂಗ್ರಹವಾದ ಹಣವನ್ನು ಬೇರೆ ಕೆಲಸಗಳಿಗೆ ಬಳಸಲಾಗುತ್ತಿದೆ. ಸರ್ಕಾರ ಈಗ ದೇವಸ್ಥಾನದ ನಿಧಿಯನ್ನು ದೇವಾಲಯದ ಅಭಿವೃದ್ಧಿಗೆ ಮಾತ್ರ ಬಳಸಿಕೊಳ್ಳಲು ಮುಂದಾಗಿದೆ ಎಂದರು.

SCROLL FOR NEXT