ರಾಜ್ಯ

ಕೋವಿಡ್-19: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ದಾಖಲೆ ಪ್ರಮಾಣದಲ್ಲಿ ಸಕ್ರಿಯ ಪ್ರಕರಣಗಳ ಇಳಿಕೆ!

Manjula VN

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ದಾಖಲೆ ಪ್ರಮಾಣದಲ್ಲಿ ಸಕ್ರಿಯ ಪ್ರಕರಣಗಳು ಇಳಿಕೆಯಾಗಿದೆ. 

ರಾಜ್ಯದಲ್ಲಿ 76,505 ರಷ್ಟಿದ್ದ ಸಕ್ರಿಯ ಪ್ರಕರಣಗಳ ಸಂಖ್ಯೆ 65,312ಕ್ಕೆ ಇಳಿಕೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.14.63ಕತ್ಕೆ ಇಳಿಕೆಯಾಗಿದೆ.

ಇನ್ನು ಬೆಂಗಳೂರಿನಲ್ಲಿ 43,698 ರಷ್ಟಿದ ಸಕ್ರಿಯ ಪ್ರಕರಣಗಳು 33,516ಕ್ಕೆ ಇಳಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.23.30ಕ್ಕೆ ಇಳಿಕೆಯಾಗಿದೆ. 

ಮೇ.15ರವರೆಗೆ ರಾಜ್ಯದಲ್ಲಿ 6,05,494 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ದಿನೇ ದಿನೇ ಸೋಂಕಿಗಿಂತ ಚೇತರಿಕೆ ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಕ್ರಿಯ ಪ್ರಕರಣ ಭಾರೀ ಪ್ರಮಾಣದಲ್ಲಿ ಕುಸಿತ ಕಂಡಿದೆ. ಪ್ರಸ್ತುತ ರಾಜ್ಯದಲ್ಲಿ 65,312 ಸಕ್ರಿಯ ಪ್ರಕರಣಗಳಿವೆ.

ಈ ನಡುವೆ ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ ಗುರುವಾರ ಒಂದೇ 14,302 ಮಂದಿ ಗುಣಮುಖರಾಗಿದ್ದು, ಚೇತರಿಕೆ ಪ್ರಮಾಣ ಶೇ.96.47ಕ್ಕೆ ತಲುಪಿದೆ. 

ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಏರಿಕೆಯಾಗಿ ಸಕ್ರಿಯ ಪ್ರಕರಣಗಳು ಇಳಿಕೆಯಾಗುತ್ತಿದ್ದರೂ ಕೂಡ ಸಾವಿನ ಪ್ರಮಾಣ ಮಾತ್ರ ಶೇ.1ಕ್ಕಿಂತಲೂ ಹೆಚ್ಚಾಗಿಯೇ ಇದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಶೇ.1.23ರಷ್ಟಿದ್ದರೆ, ಬೆಂಗಳೂರಿನಲ್ಲಿ ಶೇ.11.28ರಷ್ಟಿದೆ. ಈ ಪ್ರಮಾಣವನ್ನು ಶೇ.1ಕ್ಕಿಂತ ಕಡಿಮೆಗೆ ಇಳಿಕೆ ಮಾಡುವ ಗುರಿಯನ್ನು ರಾಜ್ಯ ಆರೋಗ್ಯ ಇಲಾಖೆ ಹೊಂದಿದೆ. 

SCROLL FOR NEXT