ರಾಜ್ಯ

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: 20.89 ಲಕ್ಷ ರೂ. ಮೌಲ್ಯದ ಚಿನ್ನ ವಶ

Raghavendra Adiga

ಮಂಗಳೂರು:  ನಗರದ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಕಾಸರಗೋಡಿನ ಪ್ರಯಾಣಿಕರೊಬ್ಬರು ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ ಮೂಲಕ ಮಂಗಳೂರು ವಿಮಾನ‌ ನಿಲ್ದಾಣಕ್ಕೆ ಬಂದಿಳಿದಿದ್ದರು. ತಪಾಸಣೆ ವೇಳೆ ಈತ 430 ಗ್ರಾಂ ತೂಕದ ಚಿನ್ನವನ್ನು ಪೌಡರ್ ಅನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಂಧಿತ ಪ್ರಯಾಣಿಕನಿಂದ ಒಟ್ಟು 20.89 ಲಕ್ಷ ರೂ ಮೌಲ್ಯದ ಅಕ್ರಮ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ಟಮ್ಸ್‌ನ ಉಪ ಆಯುಕ್ತ ಪ್ರವೀಣ್ ಕಂಡಿ, ಅಧಿಕಾರಿಗಳಾದ ರಾಕೇಶ್‌ಕುಮಾರ್, ವಿಕಾಸ್‌ಕುಮಾರ್, ಬಿಕ್ರಮ್ ಚಕ್ರವರ್ತಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

SCROLL FOR NEXT