ರಾಜ್ಯ

ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ದೂರು ಸಲ್ಲಿಕೆ: ಸಚಿವ ರಾಮುಲು ಪಿಎ ರಾಜು ಫೇಸ್​ಬುಕ್​ ಸ್ಪಷ್ಟನೆ!

Srinivas Rao BV

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ ವೈ ವಿಜಯೇಂದ್ರ ಅವರ ಕುರಿತ ಯಾವುದೇ ಆಡಿಯೋದಲ್ಲಿ ನಾನು ಭಾಗಿಯಾಗಿಲ್ಲ ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ಅವರು ದೂರು ಸಲ್ಲಿಸಿದ್ದಾರೆ ಎಂದು ಸಚಿವ ರಾಮುಲು ಪಿಎ ರಾಜು ಫೇಸ್​ಬುಕ್​ ಸ್ಪಷ್ಟೀಕರಣದಲ್ಲಿ ತಿಳಿಸಿದ್ದಾರೆ. 

ಕಳೆದ 24 ಗಂಟೆಯಿಂದ ನಡೆಯುತ್ತಿರುವ ವಿದ್ಯಮಾನಗಳ ಹಿನ್ನಲೆಯಲ್ಲಿ ಎರಡು ಮಾತು, ವಾಸ್ತವ ಸಂಗತಿ ಹಾಗೂ ಸತ್ಯಂಶವನ್ನು ನಿಮ್ಮ ಮುಂದೆ ಹಂಚಿಕೊಳ್ಳುತ್ತಿದ್ದೇನೆ ಎಂದು ರಾಜು ಬರಹ ಆರಂಭಿಸಿದ್ದಾರೆ. ಸುಮಾರು 20 ವರ್ಷಗಳಿಂದ ಸಚಿವ ಬಿ.ಶ್ರೀರಾಮುಲು ಅವರ ನೆರಳಲ್ಲಿ ಬದುಕುತ್ತಿದ್ದೇವೆ. 

ಸಚಿವರ ಪ್ರಾಮಾಣಿಕ ಜನಸೇವೆಲಿ ನೂರಾರು ಮಂದಿ ಅಳಿಲು ಸೇವೆ ಸಲ್ಲಿಸುತ್ತಿದ್ದು, ಅವರಲ್ಲಿ ಒಬ್ಬನಾಗಿ ನಾನು ಸೇವೆ ಸಲ್ಲಿಸುತ್ತಿದ್ದೇನೆ. ಶ್ರೀರಾಮುಲು ಅವರಿಗಾಗಲಿ, ಮತ್ಯಾರಿಗೆ ಆಗಲಿ ಕಳಂಕ ತರುವ ಕೆಲಸ ಎಂದೂ ಮಾಡಿಲ್ಲ, ಮುಂದೆ ಮಾಡುವುದು ಇಲ್ಲ.ಬಿಜೆಪಿ ರಾಜ್ಯ ಉಪಾಧ್ಯಕ್ಷ, ಬಿ ವೈ ವಿಜಯೇಂದ್ರ ಅವರ ಕುರಿತ ಯಾವುದೇ ಆಡಿಯೋದಲ್ಲಿ ನಾನು ಭಾಗಿಯಾಗಿಲ್ಲ ಎಂದು ಅವರು ಹೇಳಿದ್ದಾರೆ. ಪೊಲೀಸರು ಈ ಕುರಿತು ವಿಚಾರಣೆ ಕರೆದುಕೊಂಡು ಹೋಗಿದ್ದು, ವಿಚಾರಣೆ ವೇಳೆ ನನ್ನದು ಎನ್ನಲಾದ ಆಡಿಯೋ ಕೇಳಿಸಿದ್ದು, ಅದು ನನ್ನದಲ್ಲ ಎಂದು ನನ್ನ ಧ್ವನಿಯಿಂದ ಗೊತ್ತಾಗಿದೆ. 

ನನ್ನ ಕುರಿತ ಸತ್ಯಂಶ ಅವರಿಗೆ ಮನವರಿಕೆಯಾಗಿದೆ. ನನ್ನ ವಾಯ್ಸ್ ಸ್ಯಾಂಪಲ್ ಗಳನ್ನು ಪಡೆದಿದ್ದು, ಸತ್ಯಾಂಶ ಖಾತ್ರಿ ಪಡಿಸಿಕೊಳ್ಳಲು ಅವರ ಬಳಿಯಿರುವ ಆಡಿಯೋ ಜೊತೆ ಪರೀಕ್ಷೆಗೆ ಒಳಪಡಿಸಿದ್ದಾರೆ. ಅಡಿಯೋದಲ್ಲಿ ಇರುವ ಧ್ವನಿ ನನ್ನದಲ್ಲ ಎಂದು ಪ್ರಾಥಮಿಕ ತನಿಖೆಲಿ ಮನವರಿಕೆಯಾಗಿದೆ. ಇವುಗಳನ್ನು ಎಫ್ ಎಸ್ ಎಲ್ ಗೂ ಕಳುಹಿಸಿಕೊಡಲಾಗಿದೆ ಎಂದು ತಿಳಿಸಿದ್ದಾರೆ. 

ಮತ್ತೆ ಹೇಳುವೆ ಸಚಿವರ ಸೇವೆಯಲ್ಲಿ ಪ್ರಾಮಾಣಿಕವಾಗಿ ಅಳಿಲು ಸೇವೆ ಸಲ್ಲಿಸಲು ಬಂದವರಲ್ಲಿ ನಾನು ಒಬ್ಬ.ಕಳೆದ ಒಂದು ದಿನದಿಂದ ಈಚೆಗೆ ನಡೆದ ಬೆಳವಣಿಗೆಗಳು ಹಾಗೂ ವರದಿಗಳು ಸತ್ಯಕ್ಕೆ ದೂರವಾಗಿದ್ದು, ನಾನು ಆಘಾತಕ್ಕೆ ಒಳಗಾಗಿದ್ದೇನೆ, ನನ್ನ ಕುಟುಂಬವೂ ನೋವಿನಲ್ಲಿದೆ.ತಪ್ಪು ಗ್ರಹಿಕೆಯಿಂದ ವಿಜಯೇಂದ್ರ ಅವರು ದೂರು ಸಲ್ಲಿಸುವ ಮುನ್ನ, ನನ್ನನು ಕರೆಯಿಸಿ ಮಾತನಾಡಿದ್ದಿದ್ದರೆ, ವಾಸ್ತವಾಂಶ ಹಾಗೂ ಸತ್ಯಾಸತ್ಯತೆ ಗೊತ್ತಾಗಿರುತ್ತಿತ್ತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಈ ಪ್ರಕರಣದಲ್ಲಿ ನಾನು ಭಾಗಿಯಲ್ಲ. ಯಾವುದೇ ತಪ್ಪು ಮಾಡಿಲ್ಲ. ನಾನು ಜೀವನಕ್ಕೆ ಕಷ್ಟ ಪಟ್ಟು ದುಡಿದುಕೊಂಡು ಬದುಕುವ ವ್ಯಕ್ತಿ. ಅಡ್ಡದಾರಿ ಹಿಡಿಯುವವನಲ್ಲ.ಬದುಕಿಗಾಗಿ ಕಷ್ಟಪಟ್ಟು ದುಡಿಯುತ್ತೇವೆ ಹೊರತು ಅಡ್ಡದಾರಿ ಹಿಡಿದು ಬದುಕುವವರಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

SCROLL FOR NEXT