ರಾಜ್ಯದಲ್ಲಿ ತಗ್ಗಿದ ಕೊರೋನಾ 2ನೇ ಅಲೆ ತೀವ್ರತೆ: ಸಕ್ರಿಯ ಪ್ರಕರಣ 53 ಸಾವಿರಕ್ಕೆ ಇಳಿಕೆ
ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ತಗ್ಗುತ್ತಿದ್ದು, ಸದ್ಯ 53,871 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ತಗ್ಗುತ್ತಿದ್ದು, ಸದ್ಯ 53,871 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ರಾಜ್ಯದಲ್ಲಿ ನಿನ್ನೆ 2,984 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 28,49,997ಕ್ಕೆ ಏರಿಕೆಯಾಗಿದೆ.
ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.8.26 ರಿಂದ 8.24ಕ್ಕೆ ಇಳಿಕೆಯಾಗಿದ್ದು, ಶುಕ್ರವಾರ ಒಂದೇ ದಿನ 14,302 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾದ ಹಿನ್ನೆಲೆಯಲ್ಲಿ ಚೇತರಿಕೆ ಪ್ರಮಾಣ ಶೇ.96.47 ರಿಂದ ಶೇ.96.87ಕ್ಕೆ ಏರಿಕೆಯಾಗಿದೆ.
ಈ ನಡುವೆ ರಾಜ್ಯದಲ್ಲಿ ಶುಕ್ರವಾರ 88 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 35,222ಕ್ಕೆ ಏರಿಕೆಯಾಗಿದೆ. ಇನ್ನು ಬೆಂಗಳೂರು ನಗರದಲ್ಲಿ ನಿನ್ನೆ 593 ಹೊಸೇ ಕೇಸ್ ಗಳು ಪತ್ತೆಯಾಗಿದ್ದು, ಬೆಂಗಳೂರು ನಗರದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೀಗ ಒಟ್ಟಾರೆ 23,760 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
ಇನ್ನು ಮೈಸೂರಿನಲ್ಲಿ ನಿನ್ನೆ 457 ಹೊಸ ಪ್ರಕರಣಗಳು ಕಂಡು ಬಂದಿದ್ದರೆ, ದಕ್ಷಿಣ ಕನ್ನಡ 285, ಹಾಸನ 271 ಹೊಸ ಪ್ರಕರಣಗಳು ಪತ್ತೆಯಾಗಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.