ಸಂಗ್ರಹ ಚಿತ್ರ 
ರಾಜ್ಯ

ಕೆರೆಗಳ ಸಮೀಪ ಭೂ ಅತಿಕ್ರಮಣಕಾರರ ವಿಚಾರದಲ್ಲಿ ಶೂನ್ಯ ಸಹಿಷ್ಣುತೆ: ಬಿಬಿಎಂಪಿ ವಿಶೇಷ ಆಯುಕ್ತ

ಯಾವುದೇ ರೀತಿಯ ಸರ್ಕಾರಿ ಭೂಮಿ ಅತಿಕ್ರಮಣವಾಗಿದ್ದರೂ ಸಾರ್ವಜನಿಕರೂ ಬಿಬಿಎಂಪಿಗೆ ಮಾಹಿತಿ ನೀಡಬೇಕೆಂದು ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ರೆಡ್ಡಿ ಶಂಕರಬಾಬು ಅವರು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಯಾವುದೇ ರೀತಿಯ ಸರ್ಕಾರಿ ಭೂಮಿ ಅತಿಕ್ರಮಣವಾಗಿದ್ದರೂ ಸಾರ್ವಜನಿಕರೂ ಬಿಬಿಎಂಪಿಗೆ ಮಾಹಿತಿ ನೀಡಬೇಕೆಂದು ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ರೆಡ್ಡಿ ಶಂಕರಬಾಬು ಅವರು ಮನವಿ ಮಾಡಿಕೊಂಡಿದ್ದಾರೆ. 

ಮಹದೇವಪುರ ವಲಯದ ಹೂಡಿ ವಾರ್ಡ್‌ನಲ್ಲಿನ ವಾರಣಾಸಿ ಗ್ರಾಮದಲ್ಲಿ ಒತ್ತುವರಿ ಮಾಡಿಕೊಳ್ಳಲಾಗಿದ್ದ 1.6 ಎಕರೆ ಕೆರೆ ಪ್ರದೇಶವನ್ನು ಬಿಬಿಎಂಪಿ ತೆರವುಗೊಳಿಸಿತು. 

ಬಿದರಹಳ್ಳಿ ಹೋಬಳಿಯ ವಾರಣಾಸಿ ಗ್ರಾಮದ ಸರ್ವೇ ನಂಬರ್‌ 47ರಲ್ಲಿರುವ ಒಟ್ಟು 8 ಎಕರೆ 24 ಗುಂಟೆ ವಿಸ್ತೀರ್ಣದ ವಾರಣಾಸಿ (ಜಿಂಕೆತಿಮ್ಮನಹಳ್ಳಿ) ಕೆರೆ ಅಂಗಳದ ಜಮೀನಿನಲ್ಲಿ ಸ್ಥಳೀಯರು, 1 ಎಕರೆ 6 ಗುಂಟೆ ಜಮೀನನ್ನು ಒತ್ತುವರಿ ಮಾಡಿಕೊಂಡು, ಶೀಟಿನ ಮನೆಗಳನ್ನು ನಿರ್ಮಿಸಿಕೊಂಡಿದ್ದರು. ಈ ಜಾಗ ಅಂದಾಜು ರೂ. 30 ಕೋಟಿ ಮೌಲ್ಯದ್ದಾಗಿದೆ ಎಂದು ತಿಳಿದುಬಂದಿದೆ. 

ಪಾಲಿಕೆ ವಿಶೇಷ ಆಯುಕ್ತ (ಆಸ್ತಿಗಳು) ರೆಡ್ಡಿ ಶಂಕರಬಾಬು ನೇತೃತ್ವದಲ್ಲಿ ಈ ಕಾರ್ಯಾಚರಣೆ ಹಮ್ಮಿಕೊಳ್ಳಲಾಗಿತ್ತು. ಎರಡು ಜೆಸಿಬಿ, 25 ಸಿಬ್ಬಂದಿ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಒತ್ತುವರಿ ತೆರವುಗೊಳಿಸಿದ ಸ್ಥಳದಲ್ಲಿ ಕೂಡಲೇ ಬಿಬಿಎಂಪಿ ಅಧಿಕಾರಿಗಳು ತಂತಿ ಬೇಲಿ ಅಳವಡಿಸಿ ಕ್ರಮ ಕೈಗೊಂಡರು.

ಕಾರ್ಯಾಚರಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೆಡ್ಡಿ ಶಂಕರಬಾಬು ಅವರು, ಪ್ರತಿಯೊಂದು ಸರ್ಕಾರಿ ಭೂಮಿ, ಪ್ರಮುಖವಾಗಿ ಕೆರೆಗಳ ಸಮೀಪವಿರುವ ಭೂಮಿಯನ್ನು ದಾಖಲಿಸಿಕೊಳ್ಳಲಾಗಿದೆ. ಈ ಪ್ರದೇಶಗಳಲ್ಲಿ ಕಟ್ಟಡಗಳಿರಲಿ, ಸಣ್ಣ ಶೆಡ್ ಹಾಕಲು ಕೂಡ ಯಾರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 

ಸರ್ಕಾರಿ ಭೂಮಿ ಅತಿಕ್ರಣವಾಗಿದ್ದರೆ ನ್ಯಾಯಾಲಯದ ಆದೇಶಗಳಿಗಾಗಿ ಕಾಯಬಾರದು. ಅತಿಕ್ರಮಣಗಳನ್ನು ಕೂಡಲೇ ತೆರವುಗೊಳಿಸಬೇಕೆಂದು ಎಲ್ಲಾ ಎಂಜಿನಿಯರ್‌ಗಳು ಮತ್ತು ಸಿಬ್ಬಂದಿಗಳಿಗೆ ನಿರ್ದೇಶನ ನೀಡಲಾಗಿದೆ. ಎಲ್ಲಾ ಜಲಮೂಲಗಳನ್ನು ರಕ್ಷಿಸುವುದು ನಗರದ ಜೀವನ ಮಟ್ಟವನ್ನು ಸುಧಾರಿಸಲು ಸರ್ಕಾರ ಯೋಜನೆ ರೂಪಿಸುತ್ತಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT