ರಾಜ್ಯ

ರಾಜ್ಯದಲ್ಲಿ ಕೊರೋನಾದಿಂದ 67 ಸಾವು: ಬೆಂಗಳೂರಿನಲ್ಲಿ 520 ಸೇರಿ ಇಂದು 2,848 ಪ್ರಕರಣ ಪತ್ತೆ!

Vishwanath S

ಬೆಂಗಳೂರು: ರಾಜ್ಯದಲ್ಲಿ ಇಂದು 2,848 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 28,56,491ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 67 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 520 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,16,181ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,79,038ಕ್ಕೆ ಏರಿಕೆಯಾಗಿದೆ. ಇನ್ನು 41,996 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,46,575 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,848 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.94ಕ್ಕೆ ಇಳಿದಿದೆ.

SCROLL FOR NEXT