ಕೋವಿಡ್-19: ಬೆಂಗಳೂರಿನಲ್ಲಿ 715 ಸೇರಿ ರಾಜ್ಯದಲ್ಲಿಂದು 3104 ಹೊಸ ಪ್ರಕರಣ ದೃಢ, 4992 ಚೇತರಿಕೆ, 92 ಸಾವು
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3104 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2859595ಕ್ಕೆ ಏರಿಕೆಯಾಗಿದೆ.
4992 ಸೋಂಕಿತರು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಗುಣಮುಖರಾದವರ ಒಟ್ಟು ಸಂಖ್ಯೆ 2784030ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು 92 ಮಂದಿ ಮೃತಪಟ್ಟಿದ್ದು, ಈವರೆಗಿನ ಒಟ್ಟಾರೇ ಮೃತರ ಸಂಖ್ಯೆ 35526ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 40016 ಆಗಿದೆ.ಪಾಸಿಟಿವಿಟಿ ದರ ಶೇ.2.65 ರಷ್ಟಿದ್ದರೆ, ಮರಣ ಪ್ರಮಾಣ ಶೇ.2.96 ರಷ್ಟಿದೆ.
ಬೆಂಗಳೂರಿನಲ್ಲಿ 715 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 1863 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಂದು 15 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.