ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ 
ರಾಜ್ಯ

ಕೋವಿಡ್ 3ನೇ ಅಲೆ: ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ 100 ಹಾಸಿಗೆಗಳ ನೂತನ ಸುಸಜ್ಜಿತ ಐಸಿಯು

ಬೆಂಗಳೂರು ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.

ಬೆಂಗಳೂರು: ಬೆಂಗಳೂರು ನಗರದ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ ಅಶ್ವತ್ಥನಾರಾಯಣ ಅವರು ಮಂಗಳವಾರ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಮಕ್ಕಳಿಗಾಗಿಯೇ ಇಂಥ ಅತ್ಯುತ್ತಮ ಐಸಿಯು ಸಿದ್ಧಪಡಿಸಲು ದೊಡ್ಡ ಪ್ರಮಾಣದಲ್ಲಿ ಕೈಜೋಡಿಸಿದ ಕಾಗ್ನಿಜೆಂಟ್‌ ಸಂಸ್ಥೆಗೆ ಅಭಿನಂದನೆ. 1.32 ಕೋಟಿ ರೂ. ವೆಚ್ಚದಲ್ಲಿ ಐಸಿಯು ಸೌಲಭ್ಯವನ್ನು ಅಭಿವೃದ್ಧಿಪಡಿಲಾಗಿದೆ. ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಸಂಖ್ಯೆಯನ್ನು ಈಗ 30ರಿಂದ 100ಕ್ಕೆ ಹೆಚ್ಚಿಸಲಾಗಿದೆ. 

ಕೋವಿಡ್‌-19 ಸೋಂಕಿಗೆ ತುತ್ತಾಗುವ ಶಿಶುಗಳಿಗೆ ಮತ್ತು ಮಕ್ಕಳಿಗೆ ಇಲ್ಲಿ ಅತ್ಯುತ್ತಮ ಚಿಕಿತ್ಸೆ ಲಭ್ಯವಾಗಲಿದೆ. ಮಕ್ಕಳಿಗೆ ಅಗತ್ಯವಾದ ಪಿಪಿಇ ಕಿಟ್‌ಗಳು, ಆಕ್ಸಿಜನ್‌ ಬೆಡ್‌ಗಳು, ವೆಂಟಿಲೇಟರ್‌ಗಳು, ಮಲ್ಟಿ ಪ್ಯಾರಾಮಾನಿಟರ್‌ಗಳು ಸೇರಿ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ. ರಾಜ್ಯ ಸರಕಾರವು  ಸೋಂಕಿನ ಕಾಯಿಲೆ ಹತ್ತಿಕ್ಕಲು ಎಲ್ಲ ಕ್ರಮಗಳನ್ನೂ ಕೈಗೊಂಡಿದೆ. ಮೂರನೇ ಅಲೆ ತಡೆಯುವುದಕ್ಕೆ ಸಾಧ್ಯವಾದ ಸರ್ವ ಉಪ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು. 

ಆರೈಕೆ-ವೈದ್ಯರಿಗೆ ತರಬೇತಿ
ಕೋವಿಡ್ ಪೀಡಿತ ನವಜಾತ ಶಿಶುಗಳು, ಮಕ್ಕಳ ಆರೈಕೆ ಬಗ್ಗೆ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಲು ಸಂಸ್ಥೆ ಯೋಜನೆ ರೂಪಿಸಿದೆ. ನಗರದಲ್ಲಿ ಮಕ್ಕಳ ತಜ್ಞರ ಕೊರತೆ ಇರುವ ಕಾರಣ ಇತರ ವೈದ್ಯರಿಗೆ ಕೂಡ ತರಬೇತಿ ನೀಡಲಾಗುತ್ತದೆ. ಇದಕ್ಕೆ ಸಂಬಂಧಿಸಿದಂತೆ ತಜ್ಞ ವೈದ್ಯರ ತಂಡ ರಚಿಸಲಾಗುತ್ತಿದೆ. ಮಕ್ಕಳನ್ನು ಯಾವ ರೀತಿ ನಿರ್ವಹಣೆ ಮಾಡಬೇಕು, ಅವರಿಗೆ ನೀಡುವ ಔಷಧದ ಪ್ರಮಾಣ, ಆರೈಕೆ ವಿಧಾನ, ವೈದ್ಯಕೀಯ ಆಮ್ಲಜನಕ ಒದಗಿಸುವಿಕೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಪ್ರಾಯೋಗಿಕ ತರಬೇತಿ ನೀಡಲು ಸಂಸ್ಥೆ ಸಿದ್ಧತೆ ನಡೆಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?