ರಾಜ್ಯ

ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಸ್ಥಾನಮಾನ ನೀಡಿ: ಕೇಂದ್ರ ಸಚಿವರ ಬಳಿ ಡಾ. ಕೆ.ಸುಧಾಕರ್‌ ಮನವಿ

Shilpa D

ಬೆಂಗಳೂರು: ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು  ಭೇಟಿ ಮಾಡಿ  ಸಚಿವ ಡಾ.ಕೆ. ಸುಧಾಕರ್‌ ಭೇಟಿ ಮಾಡಿ, ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆಯ ಸ್ಥಾನಮಾನ ನೀಡುವಂತೆ ಕೋರಿದರು.

ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತಲು ವಿಶೇಷ ಯೋಜನೆ ರೂಪಿಸಬೇಕು. ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ವಿಸ್ತರಿಸಲು ಸಹಕರಿಸುವಂತೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಬಳಿ ಚರ್ಚಿಸಿದ್ದಾರೆ.

ನವದೆಹಲಿಯಲ್ಲಿ ಶೇಖಾವತ್ ಅವರನ್ನು ಸಚಿವ ಡಾ. ಕೆ ಸುಧಾಕರ್ ಅವರು ಭೇಟಿಯಾಗಿ. ರಾಜ್ಯದ ನೀರಾವರಿ ಮತ್ತು ಕುಡಿಯುವ ನೀರಿನ ಯೋಜನೆಗಳ ಕುರಿತಂತೆ ಮನವಿ ಸಲ್ಲಿಸಿದರು. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಬಯಲು ಸೀಮೆ ಜಿಲ್ಲೆಗಳಿಗೆ ಶಾಶ್ವತ ಕುಡಿಯುವ ನೀರು ಒದಗಿಸುವ ಎತ್ತಿನಹೊಳೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನ ನೀಡುಬೇಕೆಂದು ಮನವಿ ಮಾಡಿದ್ದಾರೆ. 

ಚಿಕ್ಕಬಳ್ಳಾಪುರ, ಕೋಲಾರ, ಬೆಂ.ಗ್ರಾ ಜಿಲ್ಲೆಗಳಲ್ಲಿ ಕೆರೆಗಳಲ್ಲಿ ಹೂಳೆತ್ತಲು ನರೇಗಾ, ಜಲ ಜೀವನ್ ಮಿಷನ್ & 15ನೇ ಹಣಕಾಸು ಆಯೋಗದ ಸಂಯೋಜನೆಯೊಂದಿಗೆ ವಿಶೇಷ ಯೋಜನೆ ರೂಪಿಸುವಂತೆ ಮನವಿ ಮಾಡಲಾಯಿತು. ಕೃಷ್ಣಾ ನದಿ ನೀರನ್ನು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಿಂದ ಕರ್ನಾಟಕದ ಗಡಿ ಜಿಲ್ಲೆಗಳಿಗೆ ವಿಸ್ತರಿಸಲು ಸಹಕರಿಸುವಂತೆ ಕೋರಿದ್ದಾರೆ.

ರಾಜಧಾನಿ ಬೆಂಗಳೂರಿಗೆ ಸಮೀಪದಲ್ಲೇ ಇರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಕೈಗಾರಿಕಾ ಹಬ್ ಆಗಿ ಬೆಳೆಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರಿಗೆ ಮನವಿ ಮಾಡಿದ್ದಾರೆ.

SCROLL FOR NEXT