ಬೆಂಗಳೂರು ವಿಮಾನ ನಿಲ್ದಾಣ 
ರಾಜ್ಯ

ವಿಮಾನ ಪ್ರಯಾಣಿಕರಿಗೆ ಶಾಕ್: ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಳಕ್ಕೆ ಕೆಐಎ ಪ್ರಸ್ತಾಪ!

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆಡಳಿತ ಮಂಡಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಬಳಕೆದಾರ ಅಭಿವೃದ್ಧಿ ಶುಲ್ಕ (ಯುಡಿಎಫ್) ಅನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಆಡಳಿತ ಮಂಡಳಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (ಬಿಐಎಎಲ್) ಬಳಕೆದಾರ ಅಭಿವೃದ್ಧಿ ಶುಲ್ಕ (ಯುಡಿಎಫ್) ಅನ್ನು ಹೆಚ್ಚಿಸಲು ಪ್ರಸ್ತಾಪಿಸಿದೆ.

ಮೂಲಗಳ ಪ್ರಕಾರ ಈ ವರ್ಷದ ಅಕ್ಟೋಬರ್‌ ನಿಂದಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಳಕೆದಾರ ಅಭಿವೃದ್ಧಿ ಶುಲ್ಕ ಹೆಚ್ಚಿಸುವ ಸಾಧ್ಯತೆ ಇದೆ. ಪ್ರಸ್ತುತ ಈ ಪ್ರಸ್ತಾಪವನ್ನು ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರಕ್ಕೆ (ಎಇಆರ್ ಎ) ಸಲ್ಲಿಸಲಾಗಿದ್ದು, ಅನುಮೋದನೆ ಬಾಕಿ ಇದೆ.

ಈಗ ದೇಶೀಯ ಪ್ರಯಾಣಿಕರಿಗೆ ಬಳಕೆದಾರ ಅಭಿವೃದ್ಧಿ ಶುಲ್ಕ 184 ರೂ. ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಇದು 839 ರೂ ವಿಧಿಸುವ ಕುರಿತು ಪ್ರಸ್ತಾಪ ಸಲ್ಲಿಸಲಾಗಿದೆ. ಬಿಐಎಲ್ ವಿಧಿಸಿರುವ ಶುಲ್ಕ ಹೆಚ್ಚಳವನ್ನು ಎಇಆರ್ ಎ ಪರಿಗಣಿಸಿದ ನಂತರ, ಮೊದಲ ಹಂತದಲ್ಲಿ ದೇಶೀಯ ಪ್ರಯಾಣಿಕರಿಗೆ 450  ರೂ. ಮತ್ತು ನಂತರದ ಹಂತದಲ್ಲಿ 555 ರೂ. ಅಂತರರಾಷ್ಟ್ರೀಯ ಪ್ರಯಾಣಿಕರಿಗೆ  1,350 ರೂ ಮತ್ತು ನಂತರದ ಹಂತದಲ್ಲಿ 2,220 ರೂ. ಶುಲ್ಕ ಹೆಚ್ಚಳಕ್ಕೆ ಪ್ರಸ್ತಾಪಿಸಲಾಗಿದೆ. ಈ ಕುರಿತಂತೆ ಏರಾ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಣೆ ನೀಡಿದ್ದು, ಈ ಸಂಬಂಧ ಸಾರ್ವಜನಿಕರ ಪ್ರತಿಕ್ರಿಯೆ ಕೇಳಲಾಗಿದೆ.  

ಹೆಚ್ಚಳದ ಹಿಂದಿನ ಕಾರಣವನ್ನು ವಿವರಿಸಿದ ಬಿಐಎಲ್‌ ಸಿಇಒ ಮತ್ತು ಎಂಡಿ ಹರಿ ಮಾರಾರ್ ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿ, 'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 13,000 ಕೋಟಿ ರೂ.ಗಳ ವಿಸ್ತರಣಾ ಕಾರ್ಯಕ್ರಮವನ್ನು ಪೂರ್ಣಗೊಳಿಸಲು ಮತ್ತು  ಕಾರ್ಯಗತಗೊಳಿಸಲು ಹೊರಟಿರುವ ಸಮಯದಲ್ಲಿ ಸುಂಕ ಪರಿಷ್ಕರಣೆ ಬಂದಿದೆ. ಈ ಹೂಡಿಕೆಯ ಚೇತರಿಕೆಯ ಅವಧಿಯಲ್ಲಿ, ಸಾಂಕ್ರಾಮಿಕದ ಪರಿಣಾಮದಿಂದಾಗಿ ಮತ್ತೆ ವಿಮಾನ ಸಂಚಾರವು ಅತ್ಯಂತ ಕೆಳಮಟ್ಟದಲ್ಲಿದೆ ಎಂಬ ಅಂಶದಿಂದಾಗಿ ಸುಂಕ ಪರಿಷ್ಕರಣೆ ಅನಿವಾರ್ಯವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT