ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ 472 ಸೇರಿ ರಾಜ್ಯದಲ್ಲಿ ಇಂದು 2,290 ಕೊರೋನಾ ಪ್ರಕರಣ ಪತ್ತೆ; 68 ಸಾವು!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,290 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು ಇಂದು 2,290 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,67,158ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 68 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,731ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 472 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,18,493ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 12 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 3,045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,93,498ಕ್ಕೆ ಏರಿಕೆಯಾಗಿದೆ. ಇನ್ನು 37,906 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,53,740 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,290 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.48ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 87, ಚಿಕ್ಕಮಗಳೂರು 69, ದಕ್ಷಿಣ ಕನ್ನಡ 209, ಹಾಸನ 228, ಮೈಸೂರು 216, ಶಿವಮೊಗ್ಗ 152, ತುಮಕೂರು 115, ಉಡುಪಿ 131 ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!