ಅಪಘಾತದಲ್ಲಿ ಸಾವನ್ನಪ್ಪಿದ ಬಾಲಕ ಹಾಗೂ ಆತ್ಮಹತ್ಯೆ ಮಾಡಿಕೊಂಡ ಟ್ರ್ಯಾಕ್ಟರ್ ಚಾಲಕ 
ರಾಜ್ಯ

ಚಾಮರಾಜನಗರ: ಟ್ರ್ಯಾಕ್ಟರ್ ಹರಿದು ಬಾಲಕ ಸಾವು; ಪಶ್ಚಾತ್ತಾಪದಿಂದ ನೊಂದು ಚಾಲಕ ಆತ್ಮಹತ್ಯೆ!

ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.

ಚಾಮರಾಜನಗರ: ತಾನು ಚಲಾಯಿಸುತ್ತಿದ್ದ ಟ್ರ್ಯಾಕ್ಟರ್ ಹರಿದ ಪರಿಣಾಮ ಗಾಯಗೊಂಡ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪಶ್ಚಾತ್ತಾಪದಿಂದ ನೊಂದ ಚಾಲಕನೊಬ್ಬ ತಾನೂ ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಸವಕನಪಾಳ್ಯ ಎಂಬಲ್ಲಿ ವರದಿಯಾಗಿದೆ.

ಚಾಲಕ ಸುನಿಲ್(23) ಆತ್ಮಹತ್ಯೆ ಮಾಡಿಕೊಂಡಿದ್ದು ಈತ ಚಲಾಯಿಸಿದ್ದ ಟ್ರ್ಯಾಕ್ಟರ್ ಅಡಿಯಲ್ಲಿ ಸಿಕ್ಕು ಹರ್ಷ (5) ಎಂಬ ಬಾಲಕ ಸಾವನ್ನಪ್ಪಿದ್ದನು. 

ಗಮನಾರ್ಹ ಸಂಗತಿ ಎಂದರೆ ಚಾಲಕ ಸುನಿಲ್ ಪಿಎಚ್ ಡಿ ವಿದ್ಯಾರ್ಥಿಯಾಗಿದ್ದ. ಘಟನೆ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಹಿನ್ನೆಲೆ

ಸವಕನಪಾಳ್ಯದಲ್ಲಿ ಕ್ರಿಕೆಟ್ ಮೈದಾನ ನಿರ್ಮಾನಕ್ಕಾಗಿ ನೆಲವನ್ನು ಸಮತಟ್ಟು ಮಾಡುವ ಕೆಲಸ ನಡೆದಿತ್ತು. ಈ ವೇಳೆ ಸುನಿಲ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ಮೈದಾನದ ಅಂಚಿನಲ್ಲಿ ಆಡುತ್ತಿದ್ದ ಬಾಲಕ ಹರ್ಷನ ಮೇಲೆ ಟ್ರಾಕ್ಟರ್ ಹರಿದಿದೆ. ಇದರಿಂದ ಗಂಭೀರ ಗಾಯಗೊಂಡ ಬಾಲಕ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲೇ ಕೊನೆಯುಸಿರೆಳೆದಿದ್ದನು. ಈ ಬಗ್ಗೆ ತಿಳಿದ ಸುನಿಲ್ ಮೈಸೂರಿನ ತನ್ನ ಕೋಣೆಗೆ ತೆರಳಿ ಪಶ್ಚಾತ್ತಾಪದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ