ಸಂಗ್ರಹ ಚಿತ್ರ 
ರಾಜ್ಯ

ಕೈಗಾರಿಕಾ ಕ್ಷೇತ್ರಕ್ಕೆ ಪ್ರತ್ಯೇಕ ಆದಾಯ ತೆರಿಗೆ ಸ್ಲ್ಯಾಬ್ ಜಾರಿಗೆ ರಾಜ್ಯ ಸರ್ಕಾರ ಚಿಂತನೆ

ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಂಗಳೂರು: ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ಪ್ರತ್ಯೇಕ ಸ್ಲ್ಯಾಬ್ ಅನ್ನು ಘೋಷಿಸುವ ಬಗ್ಗೆ ಶೀಘ್ರದಲ್ಲೇ ಕೈಗಾರಿಕಾ, ನಗರಾಭಿವೃದ್ದಿ ಹಾಗೂ ಪೌರಾಡಳಿತ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಆಸ್ತಿ ತೆರಿಗೆ ಪರಿಷ್ಕರಣೆಯ ಕುರಿತಂತೆ ನಗರದ ಎಫ್‍ಕೆಸಿಸಿಐಯಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಭೈರತಿ ಬಸವರಾಜ್ ಹಾಗೂ ಜಗದೀಶ್ ಶೆಟ್ಟರ್ ಭಾಗವಹಿಸಿದ್ದರು. 

ಕಾರ್ಯಕ್ರಮದಲ್ಲಿ ಮಾತನಾಡಿರುವ ಶೆಟ್ಟರ್ ಅವರು, `ಆಸ್ತಿ ತೆರಿಗೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೈಗಾರಿಕೋದ್ಯಮಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಈಗಾಗಲೇ ನಗರಾಭಿವೃದ್ದಿ ಹಾಗೂ ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಲಾಗಿದೆ. ಅಲ್ಲದೆ, ಈ ಬಾರಿಯ ಆಯವ್ಯಯದಲ್ಲಿ ಹಾಗೂ ನೂತನ ಕೈಗಾರಿಕಾ ನೀತಿಯಲ್ಲೂ ಪ್ರಸ್ತಾಪಿಸಲಾಗಿದೆ. ವಸತಿ ಮತ್ತು ವಾಣಿಜ್ಯ ಆಸ್ತಿ ತೆರಿಗೆಯ ಮಧ್ಯಸ್ಥವಾಗಿ ಕೈಗಾರಿಕೆಗಳಿಗೆ ನೂತನ ಸ್ಲ್ಯಾಬ್ ಅನ್ನು ರಚಿಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಈ ವಿಷಯವಾಗಿ ಸಚಿವ ಸಂಪುಟದ ಮುಂದೆ ನಗರಾಭಿವೃದ್ದಿ ಇಲಾಖೆಯ ವತಿಯಿಂದ ಶೀಘ್ರದಲ್ಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಹೇಳಿದರು. 

ಕೈಗಾರಿಕೆಗಳಿಗೋಸ್ಕರ ಮದ್ಯಪತ ಆದಾಯ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರಲು ನಾವು ಸನ್ನದ್ಧರಾಗಿದ್ದೇವೆ. ಆದಷ್ಟು ಬೇಗ ಜಾರಿಗೆ ತರುತ್ತೇವೆ. ಕೈಗಾರಿಕೆಗಳಿಂದ ಸಂಗ್ರಹವಾಗುವ ತೆರಿಗೆಯಲ್ಲಿ ಶೇ.70ರಷ್ಟನ್ನು ಆಯಾ ಕೈಗಾರಿಕೆಗಳ ಅಭಿವೃದ್ಧಿಗೆ ಬಳಕೆ ಮಾಡಿಕೊಂಡು ಉಳಿದ ಶೇ.30ರಷ್ಟು ಹಣವನ್ನು ಸ್ಥಳೀಯ ಸಂಸ್ಥೆಗಳಿಗೆ ನೀಡಿದರೆ, ಕೈಗಾರಿಕಾ ಟೌನ್‍ಶಿಪ್ ಬೆಳವಣಿಗೆಗೆ ಸಹಕಾರಿಯಾಗಲಿದೆ. ಇದರ ಬಗ್ಗೆ ನಾವು ಆದಷ್ಟು ಬೇಗ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT