ಕೋವಿಡ್-19: ಬೆಂಗಳೂರಿನಲ್ಲಿ 452 ಸೇರಿ ರಾಜ್ಯದಲ್ಲಿಂದು 2162 ಹೊಸ ಪ್ರಕರಣ ದೃಢ, 2879 ಚೇತರಿಕೆ, 48 ಸಾವು
ರಾಜ್ಯದಲ್ಲಿ ಕೊರೋನಾ ಇಳಿಕೆ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2162 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2869320ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಸಾಗಿದ್ದು, ಕಳೆದ 24 ಗಂಟೆಗಳಲ್ಲಿ 2162 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2869320ಕ್ಕೆ ಏರಿಕೆಯಾಗಿದೆ.
2879 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 2796377ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಇಂದು 48 ಜನರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಮೃತರ ಸಂಖ್ಯೆ 35779ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದ್ಯ 37141 ಸಕ್ರಿಯ ಪ್ರಕರಣಗಳಿವೆ. ಸೋಂಕು ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.1.48 ರಷ್ಟಿದ್ದರೆ, ಮರಣ ಪ್ರಮಾಣ ಶೇ. 2.22 ಆಗಿದೆ.
ಬೆಂಗಳೂರಿನಲ್ಲಿ 452 ಹೊಸ ಪ್ರಕರಣಗಳು ದೃಢಪಟ್ಟಿದ್ದು, 746 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಾವಿನ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದು, 5 ಮಂದಿ ಸಾವನ್ನಪ್ಪಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.