ರಾಜ್ಯ

ಸಾಗರ ಮಾಲಾ ಯೋಜನೆ ನಮ್ಮ ಜೀವನೋಪಾಯವನ್ನು ಕಸಿದುಕೊಳ್ಳಲಿದೆ: ಮೀನುಗಾರರು

Manjula VN

ಮಂಗಳೂರು; ಸಾಗರ ಮಾಲಾ ಯೋಜನೆಯಡಿ ಕೋಸ್ಟಲ್ ಬರ್ತ್ ನಿರ್ಮಾಣದಿಂದ ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಸಮಸ್ಯೆಯಾಗಲಿದೆ ಎಂದು ಆರೋಪಿಸಿ ಫಲ್ಗುಣಿ ಸಾಂಪ್ರದಾಯಿಕ ಮೀನುಗಾರರ ಸಂಘದ ನೇತೃತ್ವದಲ್ಲಿ ಬೆಂಗರೆಯಲ್ಲಿ ಶುಕ್ರವಾರ ಮೀನುಗಾರರು ದೋಣಿ ಹಾಗೂ ಮನೆಗಳಲ್ಲಿ ವಿನೂತನ ಪ್ರತಿಭಟನೆ ನಡೆಸಿದರು.

ಬೆಂಗರೆಯ ಫಲ್ಗುಣಿ ನದಿ ತೀರದಲ್ಲಿ ದೋಣಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಮುನೀರ್ ಕಾಟಿಪಳ್ಳ ಅವರು, ಕೋಸ್ಟಲ್ ಬರ್ತ್ ಜಾರಿಗೊಂಡರೆ ಫಲ್ಗುಣಿ, ನೇತ್ರಾವತಿ ನದಿಗಳಲ್ಲಿ ಮೀನುಗಾರಿಕೆ ನಡೆಸುವ 600 ನಾಡದೋಣಿ ಮೀನುಗಾರರು ಹಾಗೂ ಮಂಗಳೂರು ಮೀನುಗಾರಿಕಾ ದಕ್ಕೆಯಲ್ಲಿ ಬೋಟ್‌ ಮೀನುಗಾರರು ತೊಂದರೆ ಅನುಭವಿಸಲಿದ್ದಾರೆ’ ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರದ ಸಾಗರಮಾಲಾ ಯೋಜನೆ ಬೆಂಗರೆ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಇದು ರಾಜ್ಯದ ಮೂರು ಜಿಲ್ಲೆಗಳ ಕರಾವಳಿ ತೀರಕ್ಕೆ ಸಮಸ್ಯೆ ಆಗಲಿದೆ. ಹೊನ್ನಾವರ, ಕಾರವಾರದಲ್ಲಿ ಈಗಾಗಲೇ ಸಾಗರಮಾಲಾ ಯೋಜನೆ ಜಾರಿಗೊಳ್ಳುತ್ತಿದೆ. ಇದನ್ನು ವಿರೋಧಿಸಿ ಹೋರಾಟವೂ ನಡೆಯುತ್ತಿದೆ. ಆದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೀನುಗಾರರ ಹೋರಾಟವನ್ನು ಹತ್ತಿಕ್ಕಲು ಪೊಲೀಸ್ ಬಲ ಪ್ರಯೋಗಿಸುತ್ತಿದೆ. ಹೊನ್ನಾವರದಲ್ಲಿ ಇತ್ತೀಚೆಗೆ ಲಾಠಿ ಪ್ರಹಾರ ಮಾಡಿ ಹೋರಾಟಗಾರರ ಧ್ವನಿಯಡಗಿಸುವ ಪ್ರಯತ್ನ ಮಾಡಿದೆ ಎಂದು ಆರೋಪಿಸಿದ್ದಾರೆ.

SCROLL FOR NEXT