ಬಡಗಲಪುರ ನಾಗೇಂದ್ರ 
ರಾಜ್ಯ

ಗಣಿಗಾರಿಕೆ ವಿರುದ್ಧದ ಸುಮಲತಾ ಹೋರಾಟಕ್ಕೆ ರೈತ ಸಂಘದ ಬೆಂಬಲ

ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಮೈಸೂರು: ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ವಿರುದ್ಧದ ಹೋರಾಟಕ್ಕೆ ಸಂಸದೆ ಸುಮಲತಾ ಅವರಿಗೆ ರೈತ ಸಂಘ ಬೆಂಬಲ ವ್ಯಕ್ತಪಡಿಸಿದೆ.

ಮೈಸೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರೈತರ ಜೀವನಾಡಿ ಕೆಆರ್ ಎಸ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಜಲಾಶಯದ ಅಸ್ತಿತ್ವಕ್ಕೆ ಅಪಾಯವಿದೆ. ಇದರ ಮೇಲೆ ಅವಲಂಬಿತರಾಗಿರುವ ಸಾವಿರಾರು ಜನರ ಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದರು.

ಜಲಾಶಯದ ಸುತ್ತಮುತ್ತಲಿನ 20 ಮೀಟರ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಅಥವಾ ಸಕ್ರಮ ಯಾವುದೇ ಗಣಿಗಾರಿಕೆಯಾಗಲೀ, ಅದನ್ನು  ಸಂಪೂರ್ಣವಾಗಿ ನಿಲ್ಲಿಸಬೇಕು, ಈ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಅವರು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆ ಕುರಿತು ಸಂಸದೆ ಸುಮಲತಾ ಹೋರಾಟಕ್ಕೆ ನಿಂತಿದ್ದು, ಅದರ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಈ ವಿಚಾರದಲ್ಲಿ ಸುಮಲತಾ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ, ಜೆಡಿಎಸ್ ಮುಖಂಡರ ನಡುವೆ ವಾಕ್ಸಮರ ತಾರಕಕ್ಕೇರಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT