ಸಂಗ್ರಹ ಚಿತ್ರ 
ರಾಜ್ಯ

ಜಮಾನ್‌ಲಾಲ್ ಟ್ರಸ್ಟ್‌ಗೆ 354 ಎಕರೆ ಭೂಮಿ ಮರಳಿಸಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ

ಮಾಗಡಿ ರಸ್ತೆಗೆ ಹೊಂದಿಕೊಂಡಂತೆ ಇರುವ 354 ಎಕರೆ 10 ಗುಂಟೆ ಜಾಗವನ್ನು ಜಮಾನ್‌ಲಾಲ್ ಬಜಾಜ್ ಸೇವಾ ಟ್ರಸ್ಟ್‌ಗೆ ಮರಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಶನಿವಾರ ಆದೇಶಿಸಿದೆ.

ಬೆಂಗಳೂರು: ಮಾಗಡಿ ರಸ್ತೆಗೆ ಹೊಂದಿಕೊಂಡಂತೆ ಇರುವ 354 ಎಕರೆ 10 ಗುಂಟೆ ಜಾಗವನ್ನು ಜಮಾನ್‌ಲಾಲ್ ಬಜಾಜ್ ಸೇವಾ ಟ್ರಸ್ಟ್‌ಗೆ ಮರಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಶನಿವಾರ ಆದೇಶಿಸಿದೆ.

‘ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961ರ ನಿಬಂಧನೆಗಳನ್ನು ಮೀರಿ ಹೆಚ್ಚುವರಿ ಭೂಮಿಯನ್ನು ಈ ಟ್ರಸ್ಟ್ ಹೊಂದಿದೆ’ ಎಂದು ಈ ಹಿಂದೆ ಭೂ ನ್ಯಾಯಮಂಡಳಿ (ಬೆಂಗಳೂರು ಉತ್ತರ) ತೀರ್ಪು ನೀಡಿತ್ತು. 

ಇದನ್ನು ಪ್ರಶ್ನಿಸಿ ಟ್ರಸ್ಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಸ್. ದಿನೇಶ್‌ಕುಮಾರ್ ಅವರಿದ್ದ ಪೀಠ, ನ್ಯಾಯಮಂಡಳಿಯ ಈ ನಿಲುವಿಗೆ ಅತೃಪ್ತಿ ವ್ಯಕ್ತಪಡಿಸಿದೆ. 

ಇದೇ ವೇಳೆ ನ್ಯಾಯ ಮಂಡಳಿಯ ಅಧಿಕಾರಿಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಮೌಲ್ಯಮಾಪನ ಮಾಡಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪೀಠ ಸೂಚನೆ ನೀಡಿದೆ. ಅಲ್ಲದೇ, ಕೈಗೊಂಡ ಕ್ರಮಗಳ ಬಗ್ಗೆ ಮೂರು ತಿಂಗಳಲ್ಲಿ ವರದಿ ಮಂಡಿಸುವಂತೆ ನಿರ್ದೇಶನ ನೀಡಿದೆ.

ಭೂ ನ್ಯಾಯ ಮಂಡಳಿಯು ಮೂರು ಆದೇಶಗಳನ್ನು ಅಂಗೀಕರಿಸಿದ್ದು, 2017ರ ನವೆಂಬರ್ 28ರಂದು ಮೂರನೇ ಆದೇಶ ಹೊರಡಿಸಿತ್ತು. ಈ ಸಂಬಂಧ 2017ರ ಡಿಸೆಂಬರ್‌ನಲ್ಲಿ ಪತ್ರಿಕಾ ಪ್ರಕಟಣೆ ಹೊರಡಿಸಿ ಆದೇ ದಿನ ಕಂದಾಯ ಅಧಿಕಾರಿಗಳು ಮೂರು ಮಹಜರುಗಳನ್ನು ನಡೆಸಿ ಭೂಮಿ ವಶಕ್ಕೆ ಪಡೆದಿದ್ದರು. 

‘ಟ್ರಸ್ಟ್ ಹೊಂದಿರುವ ಜಮೀನಿಗೆ ಸಂಬಂಧಿಸಿದಂತೆ ಭೂ ಸುಧಾರಣಾ ಕಾಯ್ದೆಯಡಿ ಯಾವುದೇ ಅರ್ಜಿಗಳು ಬಂದಿಲ್ಲ. 400 ಎಕರೆ ಜಮೀನು ಹೊಂದಿರುವ ಬಗ್ಗೆ  ಮುನ್ನೆಚ್ಚರಿಕೆ ಕ್ರಮವಾಗಿ ಟ್ರಸ್ಟ್‌ನಿಂದಲೇ ಘೋಷಣೆ ಸಲ್ಲಿಸಲಾಗಿದೆ. ಅಲ್ಲದೇ, ಈ ಭೂಮಿ ಕೃಷಿಗೆ ಯೋಗ್ಯವಾಗಿಲ್ಲ. ಆದರೂ, ಭೂಮಿಯನ್ನು ಸರ್ಕಾರಕ್ಕೆ ಒಪ್ಪಿಸುವಂತೆ ನ್ಯಾಯ ಮಂಡಳಿ ಆದೇಶಿಸಿದೆ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.

2010ರಲ್ಲಿ ಇದೇ ರೀತಿಯ ಆದೇಶ ಹೊರಡಿಸಿದ್ದನ್ನು ಪ್ರಶ್ನಿಸಿ ಟ್ರಸ್ಟ್ ಹೈಕೋರ್ಟ್ ಮೆಟ್ಟಿಲೇರಿತ್ತು. ಪ್ರಕರಣವನ್ನು ಪುನರ್ ಪರಿಶೀಲಿಸುವಂತೆ ಹೈಕೋರ್ಟ್ ಈ ಹಿಂದೆಯೂ ನಿರ್ದೇಶನ ನೀಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ' ಗೂ ಮುನ್ನ ರಾಹುಲ್ ಹೇಳಿಕೆ!

KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!

ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!

ನಟ ದರ್ಶನ್‌ಗೆ ಕಂಟಕವಾಗ್ತಾರಾ ದೋಸ್ತಿಗಳು? ಕೋರ್ಟ್‌ನಲ್ಲಿ ಗಾಬರಿ ಬಿದ್ದ ಚಿಕ್ಕಣ್ಣ, ಯಶಸ್ ಸೂರ್ಯ ಹೇಳಿದ್ದೇನು?

'ಹಲವು ಕುಟುಂಬಗಳ ಹೆಣ್ಮಕ್ಕಳ ಮರ್ಯಾದೆ ಕಳೆದ ಪುಣ್ಯಾತ್ಮ ಡಿಕೆಶಿ; ಪ್ರಜ್ವಲ್​​ ಕೇಸ್​ ಹಿಂದಿದ್ದವರಿಂದ ಮಾಜಿ ಸಿಎಂ ಸ್ಟಿಂಗ್​​ ಆಪರೇಷನ್: HDK ಹೊಸ ಬಾಂಬ್