ರಾಜ್ಯ

ಪ್ರಧಾನಮಂತ್ರಿ ಮಹತ್ವಾಕಾಂಕ್ಷಿ ಯೋಜನೆ ರಾಜ್ಯದಲ್ಲಿ ಸಮರ್ಪಕ ಅನುಷ್ಠಾನ: ಅಠಾವಳೆ

Srinivasamurthy VN

ಬೆಂಗಳೂರು: ಕರ್ನಾಟಕದಲ್ಲಿ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಮಹತ್ವಾಕಾಂಕ್ಷಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ರಾಮದಾಸ್ ಅಠಾವಳೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ಜನ್ ಧನ್ ಯೋಜನೆ, ಪ್ರಧಾನಮಂತ್ರಿ ಮುದ್ರಾ ಯೋಜನೆ, ಪ್ರಧಾನಮಂತ್ರಿ ಆವಾಸ್ ನಗರ ಮತ್ತು ಗ್ರಾಮೀಣ ಯೋಜನೆ, ಪ್ರಧಾನಮಂತ್ರಿ ಉಜ್ವಲ ಯೋಜನೆ, ಪ್ರಧಾನಮಂತ್ರಿ ಜನ್ ಆರೋಗ್ಯ ಮತ್ತು ಉಜಾಲ ಯೋಜನೆಗಳು  ಸಮರ್ಪಕವಾಗಿ ಅನುಷ್ಠಾನಗೊಳ್ಳುತ್ತಿವೆ ಎಂದರು.]

ಬ್ಯಾಂಕಿಂಗ್ ಸೌಲಭ್ಯದಿಂದ ಹೊರಗುಳಿದಿರುವ ದುರ್ಬಲ ಸಮುದಾಯಗಳನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಒಳಪಡಿಸುವ ಪ್ರಧಾನಮಂತ್ರಿ ಜನ್ಧನ್ ಯೋಜನೆಯಡಿ2014 ರಿಂದ 2021 ರ ಜುಲೈವರೆಗೆ ದೇಶಾದ್ಯಂತ 42 ಕೋಟಿ ಕೋಟಿ 58 ಲಕ್ಷದ 67 ಸಾವಿರ ಜನ್ ಧನ್ ಖಾತೆಗಳನ್ನು ತೆರೆಯಲಾಗಿದ್ದು, 1 ಲಕ್ಷ 44 ಸಾವಿರದ  156 ಕೋಟಿ ರೂಪಾಯಿ ಠೇವಣಿ ಸಂಗ್ರಹವಾಗಿದೆ. ರಾಜ್ಯದಲ್ಲಿ 1 ಕೋಟಿ 52 ಲಕ್ಷದ 72 ಸಾವಿರ ಖಾತೆಗಳನ್ನು ತೆರೆಲಾಗಿದ್ದು, 5 ಸಾವಿರದ 279 ಕೋಟಿ ಹಣ ಈ ಖಾತೆಗಳಲ್ಲಿವೆ ಎಂದು ಹೇಳಿದರು.

ಸೂರಿಲ್ಲದವರಿಗೆ ಸೂರು ಕಲ್ಪಿಸುವ ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯಡಿ50 ಲಕ್ಷದ 8 ಸಾವಿರ ಮನೆಗಳನ್ನು ನಿರ್ಮಿಸಿದ್ದು, ರಾಜ್ಯದಲ್ಲಿ 11 ಸಾವಿರದ 205 ಕೋಟಿ ರೂಪಾಯಿ ವೆಚ್ಚದಲ್ಲಿ 2 ಲಕ್ಷ 46 ಸಾವಿರ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ 2016 ರಿಂದ 2021  ರ ಜುಲೈವರೆಗೆ 8 ಕೋಟಿ 16 ಲಕ್ಷ ಅಡುಗೆ ಅನಿಲ ಸಂಪರ್ಕ ನೀಡಲಾಗಿದ್ದು, ಕರ್ನಾಟಕದಲ್ಲಿ 38 ಲಕ್ಷ 54 ಸಾವಿರ ಸಂಪರ್ಕಗಳನ್ನು ಒದಗಿಸಲಾಗಿದೆ. ಉಜಾಲಾ ಯೋಜನೆಯಡಿ 2015 ರಿಂದ 2021 ಜುಲೈವರೆಗೆ 35.2 ಕೋಟಿ ಎಲ್.ಇ.ಡಿ ಬಲ್ಬ್ ಗಳನ್ನು ಒದಗಿಸಲಾಗಿದೆ ಎಂದು ಸಚಿವ ರಾಮದಾಸ್ ಅಠಾವಳೆ  ಹೇಳಿದರು.

ದೇಶದಲ್ಲಿ ಜಾತಿ ಆಧಾರಿತ ಜನಗಣತಿ ನಡೆಯುವ ಅಗತ್ಯವಿದ್ದು, ಈ ಸಂಬಂಧ ಪ್ರಧಾನಮಂತ್ರಿ ಹಾಗೂ ಜನಗಣತಿ ಆಯೋಗದೊಂದಿಗೆ ಸಮಾಲೋಚನೆ ನಡೆಸಿರುವುದಾಗಿ ಅವರು ತಿಳಿಸಿದರು. 
 

SCROLL FOR NEXT