ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ 48 ಸಾವು: ಬೆಂಗಳೂರಿನಲ್ಲಿ 401 ಸೇರಿ 1,913 ಕೊರೋನಾ ಪ್ರಕರಣ ಪತ್ತೆ!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,913 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 401 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,098ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 8 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 2,489 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,04,396ಕ್ಕೆ ಏರಿಕೆಯಾಗಿದೆ. ಇನ್ನು 34,234 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,24,594 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,913 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.53ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 44, ಚಿಕ್ಕಮಗಳೂರು 89, ದಕ್ಷಿಣ ಕನ್ನಡ 222, ಹಾಸನ 191, ಮೈಸೂರು 198, ಶಿವಮೊಗ್ಗ 55, ತುಮಕೂರು 170, ಉಡುಪಿ 95 ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT