ತಿರುಪತಿ ವೆಂಕಟೇಶ್ವರ 
ರಾಜ್ಯ

ಕೆಎಸ್‌ಆರ್‌ಟಿಸಿಯಿಂದ ತಿರುಪತಿಗೆ ಪ್ಯಾಕೇಜ್ ಪ್ರವಾಸ: ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕದ ಯಾತ್ರಿಕರಿಗೆ ನೆರವಾಗುವ ನಿಟ್ಟಿನಲ್ಲಿ ಇದೀಗ ಕರ್ನಾಟಕದ ಕೆಎಸ್ ಆರ್ ಟಿಸಿ ಸಾರಿಗೆ ಸಂಸ್ಥೆ ಕೂಡ ಇದೀಗ ತಿರುಪತಿ ದರ್ಶನ ಪ್ಯಾಕೇಜ್ ಆರಂಭಿಸಿದೆ.

ಬೆಂಗಳೂರು: ಕರ್ನಾಟಕದ ಯಾತ್ರಿಕರಿಗೆ ನೆರವಾಗುವ ನಿಟ್ಟಿನಲ್ಲಿ ಇದೀಗ ಕರ್ನಾಟಕದ ಕೆಎಸ್ ಆರ್ ಟಿಸಿ ಸಾರಿಗೆ ಸಂಸ್ಥೆ ಕೂಡ ಇದೀಗ ತಿರುಪತಿ ದರ್ಶನ ಪ್ಯಾಕೇಜ್ ಆರಂಭಿಸಿದೆ.

ಇದೇ ಶುಕ್ರವಾರದಿಂದ ಅಂದರೆ ಜು.16ರಿಂದಲೇ ಕೆಎಸ್‌ಆರ್‌ಟಿಸಿ ಮತ್ತೆ ಆರಂಭಿಸಲಿದ್ದು, ಬೆಂಗಳೂರಿನ ವಿವಿಧ ಪ್ರದೇಶಗಳಿಂದ ಯಾತ್ರಿಕರನ್ನು ಕರೆದೊಯ್ಯಲಾಗುತ್ತದೆ. ಈ ಕುರಿತಂತೆ ಕೆಎಸ್ ಆರ್ ಟಿಸಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಐರಾವತ ಕ್ಲಬ್ ಕ್ಲಾಸ್(ಮಲ್ಟಿ ಆಕ್ಸೆಲ್) ಬಸ್‌ನಲ್ಲಿ ಪ್ರವಾಸ ಕರೆದೊಯ್ಯಲಾಗುತ್ತದೆ.

ಪ್ರಕಟಣೆಯಲ್ಲಿರುವಂತೆ ಪ್ರತಿದಿನ ರಾತ್ರಿ 8.45ಕ್ಕೆ ಶಾಂತಿನಗರ ನಿಲ್ದಾಣದಿಂದ ಬಸ್ ಹೊರಡಲಿದೆ. ಜಯನಗರ, ನಾಗಸಂದ್ರ, ಎನ್.ಆರ್.ಕಾಲೊನಿ, ಕೆಂಪೇಗೌಡ ಬಸ್ ನಿಲ್ದಾಣ, ದೊಮ್ಮಲೂರು, ಮಾರತಹಳ್ಳಿ, ಐಟಿಐ ಗೇಟ್ ಮತ್ತು ಕೆ.ಆರ್‌.ಪುರದಲ್ಲಿ ಪ್ರಯಾಣಿಕರನ್ನು ಹತ್ತಿಸಿಕೊಂಡು ಹೊಸಕೋಟೆ ಮಾರ್ಗದಲ್ಲಿ ಪ್ರಯಾಣ ಮುಂದುವರಿಸಲಾಗುವುದು. ಮೈಸೂರು ರಸ್ತೆ ಸ್ಯಾಟಲೈಟ್ ನಿಲ್ದಾಣದಿಂದ ರಾತ್ರಿ 8.30ಕ್ಕೆ ಹೊರಡುವ ಮತ್ತೊಂದು ಬಸ್, ವಿಜಯನಗರ ಟಿಟಿಎಂಸಿ, ನವರಂಗ್, ಮಲ್ಲೇಶ್ವರ ವೃತ್ತ, ಕೆಂಪೇಗೌಡ ಬಸ್ ನಿಲ್ದಾಣ, ಐಟಿಐ ಗೇಟ್, ಕೆ.ಆರ್.ಪುರ ಮಾರ್ಗದಲ್ಲಿ ತಿರುಪತಿಗೆ ಪ್ರಯಾಣ ಮುಂದುವರಿಯಲಿದೆ.

ಭಾನುವಾರದಿಂದ ಗುರುವಾರದ ತನಕ ವಯಸ್ಕರಿಗೆ ಪ್ರಯಾಣದರ 2,200ರೂ ಮತ್ತು ಮಕ್ಕಳಿಗೆ (6ರಿಂದ 12 ವರ್ಷ) 1,800 ರೂ ದರ ನಿಗದಿ ಮಾಡಲಾಗಿದೆ. ವಾರಾಂತ್ಯದ ದಿನ (ಶುಕ್ರವಾರ ಮತ್ತು ಶನಿವಾರ) ವಯಸ್ಕರಿಗೆ 2,600ರೂ ಮತ್ತು ಮಕ್ಕಳಿಗೆ 2,000ರೂ ನಿಗದಿ ಮಾಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ