ಕೆಸಿ ನಾರಾಯಣಗೌಡ 
ರಾಜ್ಯ

ಕೆಆರ್‌ಎಸ್‌ ಸುರಕ್ಷತೆಯ ದೃಷ್ಟಿಯಿಂದ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಷೇಧಕ್ಕೆ ಚಿಂತನೆ: ನಾರಾಯಣಗೌಡ

ಕೆಆರ್‌ಎಸ್‌ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ.

ಮಂಡ್ಯ: ಕೆಆರ್‌ಎಸ್‌ ಜಲಾಶಯದ ಸುರಕ್ಷತೆಯ ದೃಷ್ಟಿಯಿಂದ ಪಾಂಡವಪುರ ತಾಲ್ಲೂಕು ಬೇಬಿ ಬೆಟ್ಟದಲ್ಲಿ ಕಲ್ಲು ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಲು ತೀರ್ಮಾನಿಸಲಾಗಿದೆ. ಈ ಕುರಿತು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಸೋಮವಾರ ಹೇಳಿದರು. 

ಅಕ್ರಮ ಗಣಿಗಾರಿಕೆ ಹಾಗೂ ಕೆಆರ್‌ಎಸ್‌ ಸುರಕ್ಷತೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಗಣಿಗಾರಿಕೆ ಸಂಪೂರ್ಣ ನಿಷೇಧದ ಬಗ್ಗೆ ಮುಖ್ಯಮಂತ್ರಿ ಹಾಗೂ ಗಣಿ ಸಚಿವರೊಂದಿಗೆ ಸಮಾಲೋಚಿಸಲಾಗುವುದು. ಅವರ ಒಪ್ಪಿಗೆ ಬಳಿಕ ಕ್ಯಾಬಿನೆಟ್‌ನಲ್ಲಿ ಈ ವಿಷಯದ ಬಗ್ಗೆ ನಿರ್ಣಯ ತೆಗೆದುಕೊಳ್ಳಲು ಆಲೋಚಿಸಲಾಗಿದೆ" ಎಂದು ತಿಳಿಸಿದ್ದಾರೆ.

ಜಲಾಶಯದ ಸುತ್ತಮತ್ತ ಗಣಿಗಾರಿಕೆ ನಿಷೇಧಿಸಲು ಅವಕಾಶವಿದೆ, ದೇಶದ ವಿವಿಧೆಡೆ ಅಣೆಕಟ್ಟೆಗಳ ಸುತ್ತ ಗಣಿಗಾರಿಕೆ ನಿಲ್ಲಿಸಿದ ಸಾಕಷ್ಟು ಉದಾಹರಣೆಗಳಿವೆ. ಗಣಿಗಾರಿಕೆ ಸಂಪೂರ್ಣ ನಿಷೇಧದ ಬಳಿಕ ಬೇಬಿ ಬೆಟ್ಟದಲ್ಲಿ ಈಗ ಲೀಸ್‌ ಅನುಮತಿ ಪಡೆದಿರುವವರಿಗೆ, ಕ್ರಷರ್‌ ಉದ್ಯಮಿಗಳಿಗೆ ಪರ್ಯಾಯ ಸ್ಥಳವನ್ನು ಗುರುತಿಸಿಕೊಡಲಾಗುವುದು. ಇದಕ್ಕಾಗಿ ಗಣಿಗಾರಿಕೆಗೆ ಅವಕಾಶವಿರುವ ಸರಕಾರಿ ಗೋಮಾಳವನ್ನು ಗುರುತಿಸಲಾಗುವುದು. ಯಾವುದೇ ಶುಲ್ಕ ಪಾವತಿಸಿಕೊಳ್ಳದೆ ಕ್ರಷರ್‌ ಸ್ಥಳಾಂತಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

ಜಲಾಶಯದ ಸುತ್ತಮುತ್ತಲಿನ ಗಣಿಗಾರಿಕೆ ವಿಚಾರ ದೊಡ್ಡಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇದರಿಂದ ಜಲಾಶಯಕ್ಕೆ ಧಕ್ಕೆ ಎಂಬ ಉಂಟಾಗಲಿದೆ ಮಾಹಿತಿಯೂ ಇದೆ. ಶಾಶ್ವತವಾಗಿ ಗಣಿ ಚಟುವಟಿಕೆ ಸ್ಥಗಿತಗೊಳಿಸಬೇಕು ಎಂಬ ಕೂಗಿದೆ. ಇದನ್ನು ಪರಿಗಣಿಸಿ ನಿಷೇಧಕ್ಕೆ ತೀರ್ಮಾನಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗುವುದು’ ಎಂದರು.

ಗಣಿಗಾರಿಕೆ ವಿಷಯದಿಂದಾಗಿ ನಮಗೂ, ಅಧಿಕಾರಿಗಳಿಗೂ ನಿದ್ದೆ ಬರುತ್ತಿಲ್ಲ. ಸುಮ್ಮನೆ ಏಕೆ ಈ ತಲೆನೋವು .ಹೀಗಾಗಿ ಗಣಿಗಾರಿಕೆಯನ್ನೇ ಸಂಪೂರ್ಣ ನಿಷೇಧಿಸಿದರೆ ಎಲ್ಲರೂ ನೆಮ್ಮದಿಯಾಗಿ ನಿದ್ದೆ ಮಾಡಬಹುದು ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT