ಸುರೇಶ್ ಕುಮಾರ್ 
ರಾಜ್ಯ

ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ ನೆಟ್ ಸಮಸ್ಯೆ ಪರಿಹಾರಕ್ಕೆ ಕ್ರಮ: ಸುರೇಶ್ ಕುಮಾರ್

ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌  ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು.

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಕಲಿಕಾ ನಿರಂತರತೆಗೆ ಅನುಕೂಲವಾಗುವಂತೆ ಅಂತರ್ಜಾಲ ನೆಟ್-ವರ್ಕ್ ಸಮಸ್ಯೆ ಪರಿಹರಿಸುವ ಕುರಿತು ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌  ಸುರೇಶ್ ಕುಮಾರ್ ಅವರು ಸೋಮವಾರ ಚರ್ಚೆ ನಡೆಸಿದರು. 

ಮಾಹಿತಿ ತಂತ್ರಜ್ಞಾನ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ್ ಮತ್ತು ತಮ್ಮ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್-ವರ್ಕ್ ಪೂರೈಕೆದಾರ ಕಂಪನಿಗಳ ಜೊತೆ ಮಾಹಿತಿ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಮುಖ್ಯ ಕಾರ್ಯದರ್ಶಿ ಸಚಿವರ ಗಮನಕ್ಕೆ ತಂದಿದ್ದಾರೆ.

ಮಳೆಗಾಲ ಆಗಿರುವುದರಿಂದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್-ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್‌ಲೈನ್‌ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನಾ ಪಾಠಗಳಿಗೆ ತೊಂದರೆ ಆಗಿದೆ. ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದ್ದು, ಮಕ್ಕಳ ಬೋಧನಾ ವಿಧಾನದ ಗುಣಮಟ್ಟ ಕಾಪಾಡಬೇಕಾಗಿದೆ’ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕೋವಿಡ್‌ ಕಾರಣ ಶಾಲೆಗಳ ಆರಂಭ ವಿಳಂಬವಾಗುತ್ತಿರುವ ಕಾರಣ ಪ್ರಸ್ತುತ ಪರ್ಯಾಯ ಬೋಧನಾ ಕ್ರಮಗಳನ್ನೇ ಅವಲಂಬಿಸಬೇಕಾಗಿದೆ. ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಬೋಧನೆ ದೊರಕಿಸಿಕೊಡುವ ನಿಟ್ಟಿನಲ್ಲಿ ನಾವು ಆನ್‌ಲೈನ್‌ ವ್ಯವಸ್ಥೆಯನ್ನೇ  ನೆಚ್ಚಿಕೊಂಡಿರುವಂಥ ಸಂದರ್ಭದಲ್ಲಿ ಮೊಬೈಲ್ ನೆಟ್-ವರ್ಕ್‌ ಬಲಪಡಿಸುವುದರಿಂದ ಗ್ರಾಮೀಣ
ಪ್ರದೇಶದ ಮಕ್ಕಳಿಗೂ ಎಲ್ಲರಂತೆ ಶಿಕ್ಷಣ ದೊರೆತು ಕಲಿಕಾ ನಿರಂತರತೆಯಲ್ಲಿ ಅವರನ್ನು ತೊಡಗಿಸಬೇಕಾಗಿದೆ’ ಎಂದು ಸಚಿವರು ತಿಳಿಸಿದ್ದಾರೆ. 

ಈ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡಾ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದು, ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದ್ದಾರೆಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ದೂರದರ್ಶನ ಅಥವಾ ಮೊಬೈಲ್ ಇಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಶಿಕ್ಷಣ ಒದಗಿಸಲು ರಾಜ್ಯದಲ್ಲಿರುವ 5,766 ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳಲ್ಲಿ ಡಿವೈಸರ್ ಅಳವಡಿಸುವ ಪ್ರಕ್ರಿಯೆ ನಡೆಯುತ್ತಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಗ್ರಾಮೀಣ ಮಕ್ಕಳ ಶಿಕ್ಷಣ ಮುಂದುವರಿಕೆ ಮತ್ತು ಕಲಿಕಾ ನಿರಂತರತೆಗೆ ಅನುಕೂಲವಾಗುವಂಥ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಮುಂದಾಗಿದೆ’ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಯತ್ತ ನುಗ್ಗಿದ 'ಪಾಕ್ ಡ್ರೋನ್' ಗಳು!

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

SCROLL FOR NEXT