ಮುರಿದು ಹೋಗಿರುವ ಛತ್ರಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವ ವ್ಯಕ್ತಿ 
ರಾಜ್ಯ

ನಗರದಲ್ಲಿ ಒಂದು ಗಂಟೆಯಲ್ಲಿ 75 ಎಂಎಂ ಮಳೆಯಾದರೂ ಪರಿಸ್ಥಿತಿ ನಿಭಾಯಿಸಬಲ್ಲೆವು: ಬಿಬಿಎಂಪಿ

ನಗರದಲ್ಲಿ ಒಂದು ಗಂಟೆಯಲ್ಲಿ 50-75 ಎಂಎಂ ಮಳೆಯಾದರೂ ಪರಿಸ್ಥಿತಿ ನಿಭಾಯಿಸಬಲ್ಲೆವು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. 

ಬೆಂಗಳೂರು: ನಗರದಲ್ಲಿ ಒಂದು ಗಂಟೆಯಲ್ಲಿ 50-75 ಎಂಎಂ ಮಳೆಯಾದರೂ ಪರಿಸ್ಥಿತಿ ನಿಭಾಯಿಸಬಲ್ಲೆವು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದಲ್ಲಿ ಒಂದು ವೇಳೆ ಒಂದು ಗಂಟೆಯಲ್ಲಿ 75 ಎಂಎಂ ಮಳೆಯಾದರೂ ಪರಿಸ್ಥಿತಿ ನಿಭಾಯಿಸಬಲ್ಲೆವು. ಇದಕ್ಕಿಂತಲೂ ಹೆಚ್ಚಿನ ಮಳೆಯಾದರೆ, ಅದರಿಂದ ಆಗುವ ಅನಾಹುತ ಕೆಲವೇ ಗಂಟೆಗಳಷ್ಟು ಇರಲಿದ್ದು, ಆ ಪರಿಸ್ಥಿತಿ ನಿಭಾಯಿಸಲೂ ಸರ್ವಸನ್ನದ್ಧರಾಗಿದ್ದೇವೆಂದು ಹೇಳಿದ್ದಾರೆ. 

ಈ ನಡುವೆ ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ಅವರು ಮಾತನಾಡಿ, ನಗರದಲ್ಲಿ ಮಂಗಳವಾರ ಸಂಜೆ 5.30ರ ವೇಳೆಗೆ 5 ಎಂಎಂ ಮಲೆಯಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 3.2 ಎಂಎಂ ಮಳೆಯಾಗಿದ್ದು, ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 3.7 ಎಂಎಂ ಮಳೆಯಾಗಿದೆ ಎಂದು ತಿಳಿಸಿದ್ದಾರೆ. 

ಮಂಗಳವಾರ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ಒಳನಾಡಿನಲ್ಲಿ ಕೂಡ ಉತ್ತಮ ಮಳೆಯಾಗಿದೆ. ಬುಧವಾರ ಬೆಳಗ್ಗೆಯಿಂದಲೇ ಬೆಂಗಳೂರು ಸೇರಿದಂತೆ ರಾಜ್ಯ ವ್ಯಾಪಿ ಮಳೆಯಾಗುತ್ತಿದೆ. ಮುಂದಿನ ಜುಲೈ 18ರವರೆಗೂ ಮಳೆ ಇದೇ ರೀತಿ ಮುಂದುವರೆಯಲಿದ್ದು, ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಜಿಲ್ಲೆಗಳಲ್ಲಿ ಜು.16ರ ವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!