ರಾಜ್ಯ

ನಗರದಲ್ಲಿ ಮತ್ತೊಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆ; ಕೋವಿಡ್ ನಿಯಮ ಪಾಲಿಸಿ, ಆತಂಕ ಬೇಡ: ಗೌರವ್ ಗುಪ್ತಾ

Manjula VN

ಬೆಂಗಳೂರು: ಕೋವಿಡ್ ರೂಪಾಂತರ ತಳಿಗಳಾದ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಸೋಂಕಿಗೆ ಜನತೆ ಹೆದರುವ ಅವಶ್ಯಕತೆ ಇಲ್ಲ. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಡನೆ ಮಾಡಿದರೆ, ಯಾವುದೇ ಸೋಂಕು ನಮಗೆ ತಗಲುವುದಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಮಂಗಳವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಗರದಲ್ಲಿ ಹೊಸದೊಂದು ಡೆಲ್ಟಾ ಪ್ಲಸ್ ಕೇಸ್ ಪತ್ತೆಯಾಗಿದೆ. ಈ ಹಿಂದೆ ಸೋಂಕು ಪತ್ತೆಯಾಗಿದ್ದ ವ್ಯಕ್ತಿ ಗುಣಮುಖರಾಗಿದ್ದಾರೆ. ಕೋವಿಡ್ ರೂಪಾಂತರ ತಳಿಗಳಾದ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಸೋಂಕಿಗೆ ನಾವು ಹೆದರುವ ಅವಶ್ಯಕತೆ ಇಲ್ಲ. ಜಿನೋಮ್ ಸೀಕ್ವೆನ್ಸಿಂಗ್ ಪರೀಕ್ಷೆ ಮಾಡುವಾಗ ಹೊಸ ಹೊಸ ರೂಪಾಂತರ ತಳಿಗಳು ಪತ್ತೆಯಾಗುತ್ತಿರುತ್ತವೆ. ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲನೆ ಮಾಡಿದರೆ, ಯಾವುದೇ ಸೋಂಕು ನಮಗೆ ತಗುಲುವುದಿಲ್ಲ ಎಂದು ಹೇಳಿದ್ದಾರೆ. 

ಕೊರೋನಾ ಮೂರನೇ ಅಲೆ ಸಾಧ್ಯತೆ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯ ಬೃಹತ್ ಆಸ್ಪತ್ರೆಗಳಲ್ಲಿ ಮಕ್ಕಳ ಚಿಕಿತ್ಸೆಗೆ ಪ್ರತ್ಯೇಕ ಕೊಠಡಿ ತೆರೆಯಲು ಸೂಚಿಸಲಾಗಿದೆ. ಪ್ರತಿಯೊಂದು ಆಸ್ಪತ್ರೆಯಲ್ಲೂ ಮಕ್ಕಳಿಗೆ ಬೇಕಾದ ವೈದ್ಯಕೀಯ ಸೌಲಭ್ಯ ಸಿದ್ಧಪಡಿಸಿಕೊಳ್ಳುವಂತೆ ಮೌಖಿಕ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. 

SCROLL FOR NEXT