ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರ ಸಾವು

ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

ಚಿತ್ರದುರ್ಗ: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಚಿತ್ರದುರ್ಗದಲ್ಲಿ ವರದಿಯಾಗಿದೆ.

ಚಿತ್ರದುರ್ಗದ ಭರಮಸಾಗರ ಹೋಬಳಿಯ ಇಸಾಮುದ್ರ ಹೊಸಹಟ್ಟಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ ಈ ಘಟನೆ ನಡೆದಿದ್ದು, ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ. ಮೃತರನ್ನು ತಿಪ್ಪಾನಾಯ್ಕ (46), ತಾಯಿ ಗುಂಡಿಬಾಯಿ (80), ಪತ್ನಿ ಸುಧಾಬಾಯಿ (43) ಹಾಗೂ ಪುತ್ರಿ ರಮ್ಯಾ (16) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಪುತ್ರಿ ರಕ್ಷಿತಾ ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಪುತ್ರ ರಾಹುಲ್‌ (18) ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಏನಿದು ಘಟನೆ?
ಸೋಮವಾರ ರಾತ್ರಿ ಊಟ ಮಾಡಿದ ತಿಪ್ಪಾನಾಯ್ಕ ಕುಟುಂಬದ ಐವರು ವ್ಯಕ್ತಿಗಳು ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದರು. ಕೂಡಲೇ ಅವರನ್ನು ಸ್ಥಳೀಯರು ಚಿತ್ರದುರ್ಗದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಸುಧಾ ಬಾಯಿ ಮತ್ತು ಗುಂಡಿ ಬಾಯಿ ನಿಧನರಾದರು. ನಂತರ ತಿಪ್ಪಾ ನಾಯಕ್, ಪುತ್ರಿ ರಮ್ಯಾ  ಮತ್ತು ರಾಹುಲ್ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಮಾರ್ಗ ಮಧ್ಯೆ ತಂದೆ ತಿಪ್ಪಾ ನಾಯಕ್ ನಿಧನರಾದರೆ, ರಮ್ಯಾ ಮಂಗಳವಾರ ರಾತ್ರಿ ಆಸ್ಪತ್ರೆಯಲ್ಲಿ ನಿಧನರಾದರು. ಇನ್ನೊಬ್ಬ ವ್ಯಕ್ತಿ ರಾಹುಲ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಅಂತೆಯೇ ಮತ್ತೋರ್ವ ಪುತ್ರ ರಕ್ಷಿತಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಡಿಎಚ್‌ಒ ಡಾ.ರಂಗನಾಥ್ ಮತ್ತು ತಂಡ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಲ್ಯಾಬ್‌ಗೆ ಕಳುಹಿಸಿದರು. ಬಳಿಕ ಅದರ ವರದಿ ಲಭ್ಯವಾಗಿದ್ದು, ವಿಷಾಹಾರ ಸೇವನೆಯಿಂದ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಂತೆಯೇ ಅವರು ತಿಂದ ಆಹಾರ  ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವಿಧಿವಿಜ್ಞಾನ ಪರೀಕ್ಷೆಗಳು ಮತ್ತು ತನಿಖೆ ನಡೆಯುತ್ತಿದೆ ಎಂದು ಎಸ್‌ಪಿ ಜಿ ರಾಧಿಕಾ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT