ರಾಜ್ಯ

ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದಿಂದ ಹಣಕಾಸು ನೆರವು ಪ್ರಕಟ

Srinivas Rao BV

ಬೆಂಗಳೂರು: ಟೋಕಿಯೋ ಒಲಿಂಪಿಕ್ಸ್ ಗೆ ಆಯ್ಕೆಯಾಗಿರುವ ರಾಜ್ಯದ ಕ್ರೀಡಾಪಟುಗಳಿಗೆ ತಲಾ 10 ಲಕ್ಷ ರೂ ಹಣಕಾಸು ನೆರವು ಒದಗಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿಯವರ ಆಧಿಕೃತ ನಿವಾಸ ‘ಕೃಷ್ಣಾ’ದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಶ್ರೀಹರಿ ನಟರಾಜ್‍, ಅಧಿತಿ ಅಶೋಕ್‍ ಮತ್ತು ಪವದ್‍ ಮಿಶ್ರಾ ಅವರಿಗೆ ಚೆಕ್‍ ವಿತರಿಸಲಾಯಿತು. ಮೊದಲ ಬಾರಿಗೆ ಈಜು ಸ್ಪರ್ಧೆಯಲ್ಲಿ ಭಾರತೀಯ ತಂಡ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದೆ. ಈ ಪೈಕಿ ಕ್ರೀಡಾಕೂಟಕ್ಕೆ ಆಯ್ಕೆಯಾದ ಮೂವರು ಭಾರತೀಯ ಪೈಕಿ ಕರ್ನಾಟಕದವರೊಬ್ಬರು ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಮುಖ್ಯಮಂತ್ರಿ ಈ ಸಂದರ್ಭದಲ್ಲಿ ಹೇಳಿದ್ದಾರೆ.

ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ರಾಜ್ಯದ ಕ್ರೀಡಾಪಟುಗಳಿಗೆ ಬಿಎಸ್‍ವೈ ಶುಭ ಹಾರೈಕೆ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ ಕರ್ನಾಟಕದ ಕ್ರೀಡಾಪಟುಗಳಿಗೆ 10 ಲಕ್ಷ ರೂ.ಗಳ ಪ್ರೋತ್ಸಾಹಧನ ವಿತರಿಸಿ ಶುಭ ಹಾರೈಸಿದರು. 
 
ಒಲಂಪಿಕ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿರುವ 120 ಕ್ರೀಡಾಪಟುಗಳ ಪೈಕಿ ರಾಜ್ಯದ ಶ್ರೀಹರಿ ನಟರಾಜ್(ಈಜು), ಫೌವಾದ್ ಮಿರ್ಜಾ (ಈಕ್ವೆಸ್ಟ್ರೀಯೆನ್) ಹಾಗೂ  ಅದಿತಿ ಅಶೋಕ್ (ಗಾಲ್ಫ್) ಸೇರಿದ್ದಾರೆ ಎಂಬುದು ಹೆಮ್ಮೆ ಪಡುವ ವಿಚಾರ. ರಾಜ್ಯದಲ್ಲಿ ಕ್ರೀಡಾ ಕ್ಷೇತ್ರಕ್ಕೆ ಆದ್ಯತೆ ನೀಡಲಾಗುತ್ತಿದ್ದು, ವಿಶ್ವ ದಜೆ೵ಯ ಕ್ರೀಡಾ ಮೂಲಸೌಕರ್ಯ ವೃದ್ಧಿಸಿ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸಲು ಸರ್ಕಾರ ಅನೇಕ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.  
 
ಮಂಡ್ಯ ನಗರದಲ್ಲಿರುವ ಕ್ರೀಡಾಂಗಣವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಉನ್ನತೀಕರಿಸಿ ಅತ್ಯುತ್ತಮ ದರ್ಜೆಯ ಸವಲತ್ತುಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುವುದು. ದೇವನಹಳ್ಳಿಯಲ್ಲಿ ಫುಟ್‍ಬಾಲ್, ಹಾಕಿ, ಶೂಟಿಂಗ್, ಈಜು,ಟೆನ್ನಿಸ್ ಕ್ರೀಡೆಗಳಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಮೂಲಭೂತ ಸೌಲಭ್ಯಗಳನ್ನು ಸೃಜಿಸಿ ಮಿಷನ್ ಒಪಂಪಿಕ್ಸ್ ಗೆ ಸಿದ್ಧಗೊಳಿಸಲಾಗುವುದು, ಗ್ರಾಮೀಣ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಕ್ರೀಡಾ ವಿಜ್ಞಾನ ಕೇಂದ್ರವನ್ನು ಎರಡು ಕೋಟಿ ರೂ.ಗಳ ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ವಿವರಿಸಿದರು. 

SCROLL FOR NEXT