ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜ್ಯ

ಕಾಸರಗೋಡು ಗ್ರಾಮಗಳ ಹೆಸರು ಬದಲಾಯಿಸುತ್ತಿಲ್ಲ: ಸಿದ್ದರಾಮಯ್ಯ ಪತ್ರಕ್ಕೆ ಕೇರಳ ಸಿಎಂ ಸ್ಪಷ್ಟನೆ

ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರುಗಳನ್ನು ಬದಲಾಯಿಸುವ ಸಂಬಂಧ ಯಾವುದೇ ನಿರ್ಧಾರವನ್ನು ಕೈಗೊಳ್ಳಲಾಗಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಸ್ಪಷ್ಟಪಡಿಸಿದ್ದಾರೆ.

ಈ ಸಂಬಂಧ ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬರೆದಿದ್ದ ಪತ್ರಕ್ಕೆ ಪ್ರತಿಕ್ರಿಯೆ ನೀಡಿ ಪತ್ರ ಬರೆದಿರುವ ಅವರು, ಕಾಸರಗೋಡು ಜಿಲ್ಲೆಯ ಗ್ರಾಮಗಳ ಹೆಸರು ಬದಲಾಯಿಸುವ ಕುರಿತು ಯಾವುದೇ ನಿರ್ಧಾರಗಳನ್ನೂ ಕೈಗೊಳ್ಳಲಾಗಿಲ್ಲ. ಉಭಯ ರಾಜ್ಯಗಳ ಜನರ ನಡುವಿನ ಸೌಹಾರ್ದತೆಯನ್ನು ಉಳಿಸಿ, ಬೆಳೆಸುವ ಸಂಬಂಧ ತಾವು ವ್ಯಕ್ತಪಡಿಸಿರುವ ಅಭಿಪ್ರಾಯಗಳನ್ನು ನಾವು ಗೌರವಿಸುತ್ತೇವೆ ಎಂದು ಹೇಳಿದ್ದಾರೆ. 

ಕೋವಿಡ್ ಸಾಂಕ್ರಾಮಿಕದಿಂದಾಗಿ ನಮ್ಮ ರಾಜ್ಯದ ಎಲ್ಲ ಶಾಲೆಗಳನ್ನು ಮುಚ್ಚಲಾಗಿದ್ದು, ಆನ್‍ಲೈನ್ ತರಗತಿಗಳು ನಡೆಯುತ್ತಿವೆ. ಕನ್ನಡ ಮಾಧ್ಯಮ ತರಗತಿಗಳನ್ನು ಸ್ಥಳೀಯ ಕೆಬಲ್ ಚಾನೆಲ್‍ಗಳ ಮೂಲಕ ಕೈಗೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!