ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ರಾಜ್ಯದಲ್ಲಿ ಇಂದು ಕೊರೋನಾದಿಂದ 48 ಸಾವು: ಬೆಂಗಳೂರಿನಲ್ಲಿ 462 ಸೇರಿ 1,977 ಪ್ರಕರಣ ಪತ್ತೆ!

ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,977 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದೆ.

ಸಾಂದರ್ಭಿಕ ಚಿತ್ರ
Vishwanath S
Updated On : 15 Jul 2021, 6:57 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,977 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,78,564ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 48 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,037ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.   

ಬೆಂಗಳೂರಿನಲ್ಲಿ ಇಂದು 462 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,20,960ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ.

Advertisement

Advertisement

ರಾಜ್ಯದಲ್ಲಿ ಇಂದು 3,188 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,10,121ಕ್ಕೆ ಏರಿಕೆಯಾಗಿದೆ. ಇನ್ನು 32,383 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,38,274 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,977 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.42ಕ್ಕೆ ಇಳಿದಿದೆ.

ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 94, ಚಿಕ್ಕಮಗಳೂರು 109, ದಕ್ಷಿಣ ಕನ್ನಡ 224, ಹಾಸನ 158, ಮೈಸೂರು 197, ಶಿವಮೊಗ್ಗ 71, ತುಮಕೂರು 86, ಉಡುಪಿ 110 ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments