ಮಾಹಿತಿ ಆಯುಕ್ತರ ಪಿಂಚಣಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ!
ರಾಜ್ಯ ಮಾಹಿತಿ ಆಯುಕ್ತರಿಗೆ ಪಿಂಚಣಿ ನೀಡುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಬೆಂಗಳೂರು: ರಾಜ್ಯ ಮಾಹಿತಿ ಆಯುಕ್ತರಿಗೆ ಪಿಂಚಣಿ ನೀಡುವುದನ್ನು ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಅರ್ಜಿ ಸಲ್ಲಿಸಿದ್ದ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ, ‘ಮೂರು ವರ್ಷ ಸೇವೆ ಸಲ್ಲಿಸಿದ ಮಾಹಿತಿ ಆಯುಕ್ತರಿಗೆ ಕಾನೂನುಬಾಹಿರವಾಗಿ ಹೆಚ್ಚುವರಿ ಪಿಂಚಣಿ ನೀಡಲಾಗುತ್ತಿದೆ’ ಎಂದು ವಾದಿಸಿದ್ದರು.
ಮಾಹಿತಿ ಹಕ್ಕುಗಳ ತಿದ್ದುಪಡಿ (2019) ಕಾಯ್ದೆ ಪ್ರಕಾರ, ಮಾಹಿತಿ ಆಯುಕ್ತರ ಐದು ವರ್ಷಗಳ ಅಧಿಕಾರದ ಅವಧಿಯನ್ನು ಮೂರು ವರ್ಷಕ್ಕೆ ಇಳಿಸಲಾಗಿದೆ. ಪಿಂಚಣಿ ಮತ್ತು ಇತರ ಭತ್ಯೆಗಳ ನಿಯಮಗಳನ್ನೂ ಕೇಂದ್ರ ಸರ್ಕಾರ ಅದರಲ್ಲಿ ಅಡಕಗೊಳಿಸಿದೆ ಎಂದು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ಪೀಠ ತಿಳಿಸಿತು. ಅರ್ಜಿದಾರರು ಮಾಹಿತಿ ಆಯುಕ್ತರ ಹುದ್ದೆಗೆ ಅರ್ಜಿ ಸಲ್ಲಿಸಿ ವಿಫಲವಾಗಿದ್ದರು ಎಂಬುದನ್ನು ಪೀಠ ಉಲ್ಲೇಖಿಸಿತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.