ರಾಜ್ಯ

ಮಂಗಳೂರು ದೇವಾಸ್ಥಾನದ ಆವರಣದಲ್ಲಿ ಕ್ರಿಶ್ಚಿಯನ್ ಯುವಕರು ಕ್ರಿಕೆಟ್ ಆಡಲು ವಿರೋಧ: ಪ್ರಕರಣ ಸುಖಾಂತ್ಯ

Shilpa D

ಮಂಗಳೂರು: ಸುಳ್ಯದ ಜಯನಗರ ಸಮೀಪದ ದೇವಾಲಯದ ಆವರಣದಲ್ಲಿ ಕ್ರಿಕೆಟ್ ಆಟದ ವಿಚಾರದಲ್ಲಿ ನಡೆದಿರುವ ವಾಗ್ವಾದ ಹಾಗೂ ವೀಡಿಯೋ ವೈರಲ್ ವಿಚಾರ ಇದೀಗ ಸುಖಾಂತ್ಯಗೊಂಡಿದೆ. ಪೊಲೀಸ್ ಠಾಣೆಯಲ್ಲಿ ಮಾತುಕತೆ ನಡೆಸಿ ಪ್ರಕರಣ ಇತ್ಯರ್ಥಗೊಳಿಸಲಾಗಿದೆ. ಹಾಗೂ ಇನ್ನು ಮುಂದೆ ದೇವಸ್ಥಾನದ ಆವರದೊಳಗೆ ಆಟ ಆಡಲು ಯಾರಿಗೂ ಅವಕಾಶ ಇಲ್ಲ ಎನ್ನುವ ನಿರ್ಧಾರಕ್ಕೆ ಬರಲಾಗಿದೆ.

ಸುಳ್ಯದ ಜಯನಗರ ಸಮೀಪದ ಕೊರಂಬಡ್ಕ ಆದಿಮೊಗೆರ್ಕಳ ದೇವಸ್ಥಾನದ ಆವರಣದಲ್ಲಿ ಕ್ರಿಶ್ಟಿಯನ್ ಯುವಕರು ಕ್ರಿಕೆಟ್ ಆಡುತ್ತಿದ್ದದ್ದಕ್ಕೆ ವಿರೋಧ ವ್ಯಕ್ತಪಡಿಸಿದ ಕುರಿತ ವೀಡಿಯೋ ಒಂದು ವೈರಲ್ ಆಗಿತ್ತು.  ದೇವಾಸ್ಥಾನಕ್ಕೆ ಸಂಬಂಧಿಸಿದ ಜಾಗದಲ್ಲಿ ಗಿಡ ನೆಡಲು ಆಡಳಿತ ಮಂಡಳಿ ನಿರ್ಧರಿಸಿತ್ತು. ಅದಕ್ಕಾಗಿ ಅಲ್ಲಿ ಗುಂಡಿ ತೆಗೆಯಲಾಗಿತ್ತು. ಇದರಿಂದ ಕ್ರಿಕೆಟ್ ಆಡಲು ಆಗಲ್ಲ ಎಂಬ ಕಾರಣಕ್ಕೆ ಸ್ಥಳೀಯ ಕೆಲ ಯುವಕರು ಆಡಳಿತ ಮಂಡಳಿಯವರ ಕ್ರಮ ಸರಿಯಲ್ಲ ಎಂದು ಹೇಳಿದ್ದರು.

ದೈವಸ್ಥಾನದ ಆವರಣದಲ್ಲಿ ಕ್ರಿಕಟ್ ಆಡಲು ಅನ್ಯ ಧರ್ಮೀಯರಿಗೆ ಅವಕಾಶವಿಲ್ಲ ಎಂದದ್ದಕ್ಕೆ ನಾವೂ ಹಿಂದುಗಳು ಎಂದು ಯುವಕರು ಮರು ಉತ್ತರಿಸಿದ್ದಾರೆ. ಬಳಿಕ ಅಲ್ಲಿದ್ದ ಅನ್ಯ ಧರ್ಮದ ಯುವಕನೊಬ್ಬನನ್ನು ಹಿಂದಕ್ಕೆ ಕಳುಹಿಸಲಾಗಿತ್ತು. ಬಳಿಕ ಯುವಕರು ಠಾಣೆ ಮೆಟ್ಟಿಲೇರಿದ್ದರು. 

ದೇವಸ್ಥಾನದ ಆವರಣದಲ್ಲಿ ಕ್ರಿಕೆಟ್ ಆಡುವ ಕ್ರಮ ಸರಿಯಲ್ಲ ಎಂಬ ಕುರಿತು ಮೊದಲೇ ಸಾರ್ವಜನಿಕವಾಗಿ ನಿರ್ಧಾರವಾಗಿದ್ದರೂ ಆಟ ಆಡಿದ್ದಕ್ಕೆ ನಾವು ವಿರೋಧ ವ್ಯಕ್ತಪಡಿಸಿದ್ದು ಬಿಟ್ಟರೆ ಧರ್ಮ ದ್ವೇಷ ಬಿತ್ತುವ ಉದ್ದೇಶ ನಮಗಿರಲಿಲ್ಲ ಎಂದು ಪ್ರವೀಣ ಜಯನಗರ ಅವರು ಪೊಲೀಸ್ ಠಾಣೆಯಲ್ಲಿ ತಿಳಿಸಿದ್ದಾರೆ.

ಸಮಿತಿಯ ಅಧ್ಯಕ್ಷ ವಸಂತ್ ಕುತ್ಪಾಜೆ ಮಾತನಾಡಿ, ದೇವಾಲಯದ ಸಮಿತಿಯ ಸದಸ್ಯರೊಬ್ಬರು ಕೋಮುವಾದಿ ಹೇಳಿಕೆ ನೀಡಿದ್ದರು ಮತ್ತು ಹುಡುಗರೊಂದಿಗೆ ಮಾತಿನ ಚಕಮಕಿ ನಡೆಸಿದ್ದಕ್ಕೆ ನಾವು ವಿಷಾದಿಸುತ್ತೇವೆ. ನಾವು ಪ್ರವೀಣ್ ಪರವಾಗಿ ಕ್ಷಮೆಯಾಚಿಸುತ್ತೇವೆ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಎಂದಿಗೂ ಸಂಭವಿಸುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

SCROLL FOR NEXT