ರಾಜ್ಯದಲ್ಲಿ ಕೊರೋನಾ ಇಳಿಮುಖ: ಇಂದು ಬೆಂಗಳೂರಿನಲ್ಲಿ 411 ಸೇರಿ 1,806 ಪ್ರಕರಣ ಪತ್ತೆ; 42 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,806 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,806 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 42 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,079ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 411 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,21,371ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 10 ಮಂದಿ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 2,748 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,12,869ಕ್ಕೆ ಏರಿಕೆಯಾಗಿದೆ. ಇನ್ನು 31,399 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,52,908 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,806 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.18ಕ್ಕೆ ಇಳಿದಿದೆ.
ರಾಜ್ಯದ ಇತರ ಜಿಲ್ಲೆಗಳಾದ ಬೆಳಗಾವಿ 70, ಚಿಕ್ಕಮಗಳೂರು 86, ದಕ್ಷಿಣ ಕನ್ನಡ 225, ಹಾಸನ 138, ಮೈಸೂರು 174, ಶಿವಮೊಗ್ಗ 110, ತುಮಕೂರು 94, ಉಡುಪಿ 105 ಪ್ರಕರಣಗಳು ವರದಿಯಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.