ರಾಜ್ಯ

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ: ಮೊದಲ ಹಂತದಲ್ಲಿ 15 ಕೋಟಿ ರೂ. ಬಿಡುಗಡೆಗೆ ಸಂಪುಟ ನಿರ್ಧಾರ

ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋಶಾಲೆ'ಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋಶಾಲೆ'ಯನ್ನು ಆರಂಭಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿಯವರು, ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆ ಆರಂಭಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ ರೂ.15 ಕೋಟಿ ಬಿಡುಗಡೆ ಮಾಡಲಾಗುವುದು. ಇನ್ನುಳಿದ ಹಣವನ್ನು ಅಗತ್ಯಕ್ಕೆ ತಕ್ಕಂತೆ ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲಾಗಿದೆ. ಕಾಯ್ದೆ ಮೂಲಕ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಗೋ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು, Video!

ಪಾಕ್‌ನ ಭಾಗವಾಗಿ ಕಾಶ್ಮೀರ ನಕ್ಷೆ ಪ್ರದರ್ಶನ: ಢಾಕಾದಲ್ಲೇ ಬಾಂಗ್ಲಾ ಮಾಜಿ ರಾಜತಾಂತ್ರಿಕನ ಬೆವರಿಳಿಸಿದ ಭಾರತೀಯ ಅಧಿಕಾರಿ ಪೂಜಾ, Video!

ಅಕ್ರಮ ಆಸ್ತಿ ಗಳಿಕೆ ಕೇಸ್: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗ

ಮೈಸೂರು ದಸರಾದಲ್ಲಿ ಕಂಬಳ ಬೇಡ: ಜನರ ಭಾವನೆಗಳಿಗೆ ಬೆಲೆ ಕೊಡಿ, ಕುಮಾರಸ್ವಾಮಿ, ವಿಜಯೇಂದ್ರ ಒತ್ತಾಯ!

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ