ರಾಜ್ಯ

ಕೋವಿಡ್-19: ಪೂರೈಕೆ ಆಧಾರದ ಮೇಲೆ ವಿಶೇಷ ಲಸಿಕಾ ಶಿಬಿರಗಳ ನಡೆಸಲು ಬಿಬಿಎಂಪಿ ನಿರ್ಧಾರ

Manjula VN

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ಎಂದಿನಂತೆ ಮುಂದುವರೆಯಲಿದ್ದು, ಲಸಿಕೆ ಲಭ್ಯತೆ ಆಧಾರದ ಮೇಲೆ ವಿಶೇಷ ಲಸಿಕಾ ಶಿಬಿರಗಳ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಗುರುವಾರ ಹೇಳಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾರ್ಡ್ ಮಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಇನ್ನು ಆಯ್ದ ಗುಂಪುಗಳಿಗೆ 18 ವರ್ಷ ಮೇಲ್ಪಟ್ಟವರಿಗೆ ತಾತ್ಕಾಲಿಕ ಲಸಿಕಾ ಶಿಬಿರ ತೆರೆದು ಲಸಿಕೆ ಹಾಕಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ಲಸಿಕೆ ನೀಡುವ ವ್ಯವಸ್ಥೆ ಮಡಲಾಗಿದೆ ಎಂದು ಹೇಳಿದ್ದಾರೆ. 

198 ವಾರ್ಡ್ ಗಳಲ್ಲಿ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಲಸಿಕೆ ಕೇಂದ್ರವನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ವಿಶೇಷ ಲಸಿಕಾ ಶಿಬಿರಗಳನ್ನು ಲಸಿಕೆ ಲಭ್ಯತೆ ಆಧಾರದಲ್ಲಿ ಮುಂದುವರೆಸಲಾಗುವುದು ಎಂದು ತಿಳಿಸಿದ್ದಾರೆ. 

SCROLL FOR NEXT