ರಾಜ್ಯ

ಹಾಸನದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆ: ಬೆಳೆ ನಾಶ, ರೈತರಲ್ಲಿ ಮನೆ ಮಾಡಿದ ಆತಂಕ

Shilpa D

ಹಾಸನ: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆರ್ಭಟಕ್ಕೆ ಜನರು ಹೈರಾಣಾಗಿದ್ದಾರೆ. 

ಹಾಸನ ಜಿಲ್ಲೆಯಲ್ಲಿ ಕಳೆದ  48 ಗಂಟೆಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆ-ಸಕಲೇಶಪುರ, ಆಲೂರು, ಹಾಸನ, ಬೇಲೂರು, ಅರಕಲಗೂಡಿನಲ್ಲಿ ವರುಣನ ಅಬ್ಬರ, ಜನಜೀವನ ಸಂಪೂರ್ಣ ಅಸ್ತವ್ಯಸ್ತ-ಮಲೆನಾಡು ಭಾಗದಲ್ಲಿ ಭಾರಿ ಮಳೆ ಹಿನ್ನೆಲೆ-ಹೇಮಾವತಿ ಜಲಾಶಯಕ್ಕೆ ಒಳಹರಿವಿನಲ್ಲಿ ಏರಿಕೆಯಾಗಿದೆ.

ಭಾರೀ ಮಳೆಯಿಂದಾಗಿ ಬೆಳೆದು ನಿಂತ ಶುಂಠಿ, ಭತ್ತ, ಮತ್ತು ಜೋಳದ ಬೆಳೆಗಳಿಗೆ ಹಾನಿ ಉಂಟಾಗಿದೆ. ಅರಕಲಗೂಡು ಮತ್ತು ಸಕಲೇಶಪುರ, ಆಲೂರಿನ ನೂರಾರು ಎಕರೆ ಜಮೀನು ಜಲಾವೃತಗೊಂಡಿದೆ.

ಇನ್ನೂ ಮಳೆಯಿಂದ ಜಲಾವೃತ ಪ್ರದೇಶಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್. ಗಿರೀಶ್ ಹಾಗೂ ತಹಶೀಲ್ದಾರ್ ಮತ್ತು ಅಧಿಕಾರಿಗಳು ಪರಿಹಾರ ಕಾರ್ಯಗಳಿಗೆ ಮುಂದಾಗಿದ್ದಾರೆ. ತಗ್ಗು ಪ್ರದೇಶದಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

SCROLL FOR NEXT