ರಾಜ್ಯ

ವಿಧಾನಸೌಧದ ಕಾರಿಡಾರ್ ನಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಬಂದ್

Raghavendra Adiga

ಬೆಂಗಳೂರು: ವಿಧಾನಸೌಧದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಹಾಗೂ ಛಾಯಾಗ್ರಹಣವನ್ನು ಮಾಡುವುದನ್ನು ನಿರ್ಬಂಧಿಸಿ ಕರ್ನಾಟಕ ಸರ್ಕಾರ ಸಚಿವಾಲಯ ಸುತ್ತೋಲೆ ಹೊರಡಿಸಿದೆ.

ಈ ಸಂಬಂಧ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆ(ಕಾರ್ಯಕಾರಿ) ಇದರ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ರವೀಂದ್ರ ಸಚಿವರ ವಿಧಾನಸೌಧ ವಿಕಾಸಸೌಧದ ಕಚೇರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಕಲಾಪಗಳು ಹಾಗೂ ಇನ್ನಿತರೇ ಸಂದರ್ಭಗಳಲ್ಲಿ ಕೆಲವು ಪತ್ರಿಕಾ ಹಾಗೂ ವಿದ್ಯುನ್ಮಾನ ಮಾಧ್ಯಮದವರು ವಿಧಾನಸೌಧ ಕಟ್ಟಡದ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣ ಮಾಡುತ್ತಿದ್ದು, ಹಲವಾರು ಬಾರಿ ಗಣ್ಯ ವ್ಯಕ್ತಿಗಳ ಸುಗಮ ಚಲನವಲನಕ್ಕೆ ಅಡ್ಡಿಯುಂಟಾಗಿರುವುದು ಗಮನಕ್ಕೆ ಬಂದಿದ್ದು, ಸುಗಮ ಚಲನೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ಮುಖ್ಯಮಂತ್ರಿಗಳು ಹಾಗೂ ಸಚಿವರಿಂದ ಹೇಳಿಕೆಯನ್ನು ಪಡೆಯುವ ಸಲುವಾಗಿ ವಿಧಾನಸೌಧದ ಕೆಂಗಲ್ ದ್ವಾರದ ಬಳಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಇನ್ನುಮುಂದೆ ನಿರ್ದಿಷ್ಟಪಡಿಸಿದ ಜಾಗವನ್ನು ಹೊರತುಪಡಿಸಿ ಕಾರಿಡಾರ್ ಗಳಲ್ಲಿ ವಿಡಿಯೋ ಚಿತ್ರೀಕರಣ ಛಾಯಾಗ್ರಹಣವನ್ನು ನಿಷೇಧಿಸುವುದು  ಸೂಕ್ತವೆಂಬ ಪ್ರಸ್ತಾವನೆಯು ಮುಖ್ಯಮಂತ್ರಿಯವರಿಂದ ಅನುಮೋದಿಸಲ್ಪಟ್ಟಿರುತ್ತದೆ

SCROLL FOR NEXT