ರಾಜ್ಯ

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ

Srinivas Rao BV

ಮೈಸೂರು: ಕೇಂದ್ರ ಶಿಕ್ಷಣ ಸಚಿವಾಲಯದ ಶಾಸನಬದ್ಧ ಅಂಗವಾದ, ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತು,  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯಕ್ಕೆ ನಿರ್ವಹಣಾ ವಿಭಾಗದಡಿ ಸ್ನಾತಕೋತ್ತರ ವ್ಯವಹಾರ ನಿರ್ವಹಣಾ ಕೋರ್ಸ್ ನಡೆಸಲು (ಮಾಸ್ಟರ್ ಆಫ್ ಬ್ಯುಸಿನೆಸ್ ಅಡ್ಮಿನಿಸ್ಟ್ರೇಷನ್) ಅನುಮತಿಸಿದೆ."

ಮುಕ್ತ ಹಾಗೂ ದೂರಶಿಕ್ಷಣ ಮಾದರಿಯಡಿ ಎಂ.ಬಿ.ಎ. ಕೋರ್ಸ್ ನಡೆಸಲು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಪಡೆದಿರುವ ದೇಶದ ಏಕೈಕ ವಿಶ್ವವಿದ್ಯಾಲಯ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದು, ೨೦೨೧-೨೨ನೇ ಸಾಲಿಗೆ ಮುಕ್ತ ಹಾಗೂ ದೂರಶಿಕ್ಷಣ ಕಲಿಕಾ ವಿಧಾನದಡಿ ಎಂ.ಬಿ.ಎ. ಕೋರ್ಸ್ ಗೆ (ಜನರಲ್ ಅಡ್ಮಿನಿಸ್ಟ್ರೇಷನ್) 10,000ಸೀಟುಗಳಿಗೆ ಪ್ರವೇಶಾತಿ ಕಲ್ಪಿಸಲು ಎಐಸಿಟಿಇ ಅನುಮತಿಸಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯಕ್ಕೆ ತಾಂತ್ರಿಕ ಕೋರ್ಸ್ ಆರಂಭಿಸಲು ಎಐಸಿಟಿಇ ಅನುಮತಿ ನೀಡಿರುವುದಕ್ಕೆ ಕೆಎಸ್ ಒಯು ಕುಲಪತಿ ವಿದ್ಯಾಶಂಕರ್ ಸಂತಸ ವ್ಯಕ್ತಪಡಿಸಿದ್ದಾರೆ. ದೇಶಾದ್ಯಂತ ಒಟ್ಟು 18 ಮುಕ್ತ ವಿಶ್ವ ವಿದ್ಯಾನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು,  ಈ ಪೈಕಿ ಎಐಸಿಟಿಇ ಇಂದ ಮಾನ್ಯತೆ ಪಡೆದ ದೇಶದ ಮೊದಲ ಮುಕ್ತ ವಿವಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ ಎಂದು ಹೇಳಿದ್ದಾರೆ.

SCROLL FOR NEXT