ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ 3ನೇ ಅಲೆ ಭೀತಿ: ಲಾಲ್ ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಕೊರೋನಾ ಸಂಭಾವ್ಯ ಮೂರನೇ ಅಲೆ ಭೀತಿಯ ಹಿನ್ನೆಲೆ ಬೆಂಗಳೂರು ಲಾಲ್ ಬಾಗ್ ಉದ್ಯಾನವನದಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದಾಗಿದೆ.

ಬೆಂಗಳೂರು: ಕೊರೋನಾ ಸಂಭಾವ್ಯ ಮೂರನೇ ಅಲೆ ಭೀತಿಯ ಹಿನ್ನೆಲೆ ಬೆಂಗಳೂರು ಲಾಲ್ ಬಾಗ್ ಉದ್ಯಾನವನದಲ್ಲಿ ಆಗಸ್ಟ್ ತಿಂಗಳಲ್ಲಿ ನಡೆಯಬೇಕಿದ್ದ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದಾಗಿದೆ.

ಕೊರೋನಾ ಎರಡನೇ ಅಲೆ ಇಳಿಕೆಯಾದ ಹಿನ್ನೆಲೆ ಫಲಪುಷ್ಪ ಪ್ರದರ್ಶನ ಆಯೋಜನೆಗೆ ನಿರ್ಧರಿಸಲಾಗಿತ್ತು. ಆದರೆ ಸಂಭವನೀಯ ಮೂರನೇ ಅಲೆ ಬಗೆಗೆ ತಜ್ನರ ಸುಳಿವಿನ ಹಿನ್ನೆಲೆ ಈ ಬಾರಿ ಫಲಪುಷ್ಪ ಪ್ರದರ್ಶನ ನಡೆಸದಿರಲು ತೀರ್ಮಾನಿಸಲಾಗಿದೆ.

ಇದಲ್ಲದೆ ಪ್ರದರ್ಶನದ ವೇಳೆ ಆಯೋಜಿಸಲ್ಪಡುತ್ತಿದ್ದ ಕಿರು ತೋಟ ಸ್ಪರ್ಧೆ, ಟೆರೇಸ್ ಗಾರ್ಡನ್ ಸ್ಪರ್ಧೆ ಸೇರಿದಂತೆ ಹಲವಾರು ಸ್ಪರ್ಧೆಗಳೂ ಸಹ ರದ್ದುಗೊಂಡಿದೆ.

ಇದಕ್ಕೆ ಹಿಂದೆ ಕೊರೋನಾ ಕಾರಣದಿಂದ ಕಳೆದ ವರ್ಷ ಆಗಸ್ಟ್ ನಲ್ಲಿ ಹಾಗೂ ಈ ವರ್ಷ ಜನವರಿಯಲ್ಲಿ ನಡೆಯಬೇಕಾಗಿದ್ದ ಫಲಪುಷ್ಪ ಪ್ರದರ್ಶನ ಸಹ ರದ್ದಾಗಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿನ ಐದು ಹೊಸ ಪಾಲಿಕೆಗಳಿಗೆ 368 ವಾರ್ಡ್ ರಚನೆ: ಪಶ್ಚಿಮ ಪಾಲಿಕೆಗೆ ಗರಿಷ್ಠ 111 ವಾರ್ಡ್

ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆ

ಟ್ರೋಫಿ 'ಕಳ್ಳ' ಮೊಹ್ಸಿನ್ ನಖ್ವಿಗೆ ಸಂಕಷ್ಟ? ಏಷ್ಯಾ ಕಪ್ ಟ್ರೋಫಿ ಮರಳಿ ಪಡೆಯಲು ಅಖಾಡಕ್ಕೀಳಿದ BCCI; ಷರತ್ತು ಹಾಕಿದ ನಖ್ವಿ!

ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!

ರಾಜ್ಯ ಸರ್ಕಾರದಿಂದ "ಮಹಿಷಾಸುರ ಟ್ಯಾಕ್ಸ್" : ಬೆಂಗಳೂರು-ಮೈಸೂರು ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಬಿಜೆಪಿ ಕಿಡಿ!

SCROLL FOR NEXT