ರಾಜ್ಯ

ಮಾಜಿ ಸಂಸದ, ಹಿರಿಯ ರೈತ ಹೋರಾಟಗಾರ ಜಿ. ಮಾದೇಗೌಡ ವಿಧಿವಶ

Shilpa D

ಮಂಡ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ರೈತಹಿತರಕ್ಷಣಾ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಜಿ.ಮಾದೇಗೌಡ ಶನಿವಾರ ಭಾರತೀನಗರದ ಜಿ.ಮಾದೇಗೌಡ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 

94 ವರ್ಷ ವಯಸ್ಸಿನ ಜಿ.ಮಾದೇಗೌಡರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. ಮಾದೇಗೌಡರು ಕಾವೇರಿ ಹೋರಾಟದಲ್ಲಿ ಮುಂಚೂಣಿ ನಾಯಕರಾಗಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ಕಿರುಗಾವಲು ಕ್ಷೇತ್ರ ಮಳವಳ್ಳಿ ಕ್ಷೇತ್ರದೊಂದಿಗೆ ಸೇರಿಕೊಂಡ ನಂತರ ಮಂಡ್ಯಕ್ಕೆ ಬಂದರು. 1989, 1995ರಲ್ಲಿ 2 ಬಾರಿ ಲೋಕಸಭಾ ಸದಸ್ಯರಾಗಿದ್ದರು. 1980–83ರವರೆಗೆ ಗುಂಡೂರಾವ್‌ ಸಂಪುಟದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವರಾಗಿದ್ದರು.

ರಾಜಕಾರಣಿ ಮಾದೇಗೌಡರು ಕಾವೇರಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿದ್ದರು. ಇತರೆ ಅನೇಕ ರೈತ ಹೋರಾಟಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು.
 

SCROLL FOR NEXT