ರಾಜ್ಯ

ಕೆ.ಆರ್. ಮಾರುಕಟ್ಟೆಯಲ್ಲಿ ಫುಡ್ ಕೋರ್ಟ್: ಯೋಜನೆ ಕೈಬಿಟ್ಟ ಬಿಬಿಎಂಪಿ ಅಧಿಕಾರಿಗಳು

Manjula VN

ಬೆಂಗಳೂರು: ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಕೃಷ್ಣರಾಜ ಮಾರುಕಟ್ಟೆಯಲ್ಲಿ ಫುಡ್ ಕೋರ್ಟ್ ನಿರ್ಮಿಸುವ ಯೋಜನೆಯನ್ನು ಕೈಬಿಟ್ಟಿದ್ದಾರೆಂದು ತಿಳಿದುಬಂದಿದೆ. 

ನಿನ್ನೆಯಷ್ಟೇ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಸ್ಮಾರ್ಟ್ ಸಿಟಿ ವತಿಯಿಂದ ಕೆಆರ್ ಮಾರುಕಟ್ಟೆಯ ಪುನರ್ ನವೀಕರಣ ಕಾಮಗಾರಿ ಪ್ರಗತಿಯನ್ನು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವೇಳೆ ಹಣ್ಣು ಮತ್ತು ತರಕಾರಿ ಮಾರಾಟಗಾರರ ಸಂಘದ ಸದಸ್ಯರು ಫೋಡ್ ಕೋರ್ಟ್ ನಿರ್ಮಾಣ ಮಾಡುವ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿತು. 

ತಮಗಿರುವ ಸ್ವಲ್ಪ ಸಮಯದಲ್ಲಿ ಅಗತ್ಯವಿರುವ ವಸ್ತುಗಳ ಖರೀದಿಗೆ ವ್ಯಾಪಾರಸ್ಥರು, ಮಾರಾಟಗಾರರು ಮತ್ತು ಗ್ರಾಹಕರು ಮಾರುಕಟ್ಟೆಗೆ ಬರುತ್ತಾರೆ. ಈ ಸ್ಥಳದಲ್ಲಿ ಫುಡ್ ಕೋರ್ಟ್ ನಿರ್ಮಾಮ ಮಾಡುವುದು ಸಂಪನ್ಮೂಲ ವ್ಯರ್ಥ ಮಾಡಿದಂತಾಗುತ್ತದೆ. ಇದರ ಬದಲು, ಜನರಿಗೆ ಸೂಕ್ತ ರೀತಿಯ ಶೌಚಾಲಯ ಹಾಗೂ ಆರೋಗ್ಯ ವ್ಯವಸ್ಥೆಗಳ ಸ್ಥಾಪನೆಗೆ ಪಾಲಿಕೆ ಅಧಿಕಾರಿಗಳು ಗಮನ ನೀಡಬೇಕಿದೆ ಎಂದು ಹೇಳಿದರು. 

ಬಿಬಿಎಂಪಿ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಮಾತನಾಡಿ, ಫುಡ್ ಕೋರ್ಟ್'ಗೆ ವಿರೋಧ ವ್ಯಕ್ತ ಹಿನ್ನೆಲೆಯಲ್ಲಿ ಯೋಜನೆಯನ್ನು ಕೈಬಿಡುವಂತೆ ಇಂಜಿನಿಯರ್ ಗಳಿಗೆ ಸೂಚನೆ ನೀಡಲಾಗಿದೆ. ಎರಡನೇ ಮಹಡಿಗಳಲ್ಲಿ ನೆಲಹಾಸು ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ. ಪಶ್ಚಿಮ ಪ್ರವೇಶದ್ವಾರದ ಬಳಿ ರ‍್ಯಾಂಪ್ ನಿರ್ಮಾಣ ಕೆಲಸ ನಡೆಯುತ್ತಿದೆ. ಈ ಕುರಿತು ವರದಿ ಸಲ್ಲಿಸುವಂತೆಯೂ ಸೂಚಿಸಲಾಗಿದೆ. ಆಗಸ್ಟ್ 15ರೊಳಗೆ ಕಟ್ಟಡ ಬಳಕೆಗೆ ವ್ಯಾಪಾರಸ್ಥರಿಗೆ ಅನುವು ಮಾಡಿಕೊಡುವ ಗುರಿಯನ್ನು ಹೊಂದಲಾಗಿದ ಎಂದು ತಿಳಿಸಿದರು. 

SCROLL FOR NEXT