ತುಳು ಲಿಪಿ ಫಾಂಟ್ ‘ತುಳು ಮಂದಾರ’ವನ್ನು ಬಿಡುಗಡೆಗೊಳಿಸಿದ ಶಾಸಕ ರಘುಪತಿ ಭಟ್ 
ರಾಜ್ಯ

ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳು ಬಳಕೆಗೆ ಅವಕಾಶ ನೀಡಿ: ಸ್ಪೀಕರ್'ಗೆ ಶಾಸಕ ರಘುಪತಿ ಭಟ್ ಮನವಿ

ರಾಜ್ಯದಲ್ಲಿ ತುಳುವಿಗೆ ಅಧಿಕೃತ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತನಾಡಲು ಅವಕಾಶ ಕಲ್ಪಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಅವರು ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. 

ಉಡುಪಿ: ರಾಜ್ಯದಲ್ಲಿ ತುಳುವಿಗೆ ಅಧಿಕೃತ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತನಾಡಲು ಅವಕಾಶ ಕಲ್ಪಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಅವರು ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. 

ಜೈತುಳು ನಾಡ್ ಸಂಘಟನೆಯ ವತಿಯಿಂದ ಅಭಿವೃದ್ಧಿ ಪಡಿಸಲಾದ ತುಳು ಲಿಪಿ ಫಾಂಟ್ ‘ತುಳು ಮಂದಾರ’ವನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಸೋಮವಾರ ಉಡುಪಿ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಳಿಸಿದರು.

ಬಳಿಕ ಮಾತನಾಡಿದ ಅವರು, ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತನಾಡಲು ಅವಕಾಶ ಕಲ್ಪಿಸುವಂತೆ ಸಭಾಧ್ಯಕ್ಷರಿಗೆ ಈ ಹಿಂದೆ ಮನವಿ ಮಾಡಲಾಗಿತ್ತು. ಆದರೆ ಇವುಗಳನ್ನು ದಾಖಲು ಮಾಡುವವರಿಗೆ ತುಳು ಭಾಷೆಯ ಅರಿವಿನ ಕೊರತೆಯಿರುವುದರಿಂದ ಇದಕ್ಕೆ ಅವಕಾಶ ನೀಡಿರಲಿಲ್ಲ. ಮುಂದಿನ ಚಳಿಗಾಲದ ಅಧಿವೇಶನದಲ್ಲಿ ತುಳುವಿನಲ್ಲಿ ಮಾತನಾಡಲು ಅವಕಾಶ ನೀಡುವಂತೆ ಒತ್ತಾಯಿಸಲಾಗುವುದು ಎಂದು ಹೇಳಿದರು. 

ಜನಪ್ರತಿನಿಧಿಗಳಲ್ಲಿ ಈಗಾಗಲೇ ತುಳು ಭಾಷೆ ಹಾಗೂ ಲಿಪಿಯ ಬಗ್ಗೆ ಜಾಗೃತಿ ಮೂಡಿದೆ. ಮುಂದೆ ಸರಕಾರವೇ ಜನರಿಗೆ ತುಳು ಲಿಪಿ ಕಲಿಸುವ ಕಾರ್ಯಕ್ಕೆ ಮುಂದಾಗಬೇಕು. ತುಳುವನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಿಸು ವಂತೆ ಸರಕಾರವನ್ನು ಒತ್ತಾಯಿಸಲಾಗುವುದು. ಅದಕ್ಕಿಂತ ಮುಖ್ಯವಾಗಿ ಈ ಭಾಷೆಯನ್ನು ಹಾಗೂ ಲಿಪಿಯನ್ನು ಜನ ಮಧ್ಯೆ ಕೊಂಡೊಯ್ಯುವ ಕಾರ್ಯವನ್ನು ನಾವು ಮಾಡಬೇಕಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ