ಕೃಷಿ ಸಚಿವ ಬಿ.ಸಿ. ಪಾಟೀಲ್ 
ರಾಜ್ಯ

ಇನ್ನು ಮುಂದೆ ಬೆಳೆವಿಮೆಗೂ ನಾಮಿನಿ ಮಾಡಿಸಿಕೊಳ್ಳಬೇಕು: ಬಿ.ಸಿ. ಪಾಟೀಲ್

ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ ವಿಮೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಇನ್ನು ಮುಂದೆ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆಗೆ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ಸೂಚನೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆ ಬೆಳೆ ವಿಮೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಇನ್ನು ಮುಂದೆ ಬೆಳೆ ವಿಮೆ ಮಾಡಿಸಿಕೊಳ್ಳುವಾಗ ವಿಮೆ ಮಾಡಿಸುವ ರೈತನ ಜೊತೆಗೆ ಕುಟುಂಬದ ನಾಮಿನಿಯನ್ನು ಸಹ ಮಾಡಿಸಿಕೊಳ್ಳಬೇಕೆಂದು ಕೃಷಿ ಸಚಿವ ಬಿ. ಸಿ. ಪಾಟೀಲ್ ವಿಮಾ ಕಂಪನಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ವಿಕಾಸಸೌಧದ ಕಚೇರಿಯಲ್ಲಿ ಬೆಳೆ ವಿಮೆ ಸಂಬಂಧ ಕೃಷಿ ಹಾಗೂ ತೋಟಗಾರಿಕಾ ಇಲಾಖಾಧಿಕಾರಿಗಳ ಜೊತೆಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಇಷ್ಟು ದಿನ ವಿಮಾ ಕಂಪನಿಗಳು ನಾಮಿನಿಯನ್ನು ಪರಿಗಣಿಸುತ್ತಿರಲಿಲ್ಲ. ಇದರಿಂದ ವಿಮಾದಾರ ರೈತ ಮೃತಪಟ್ಟಲ್ಲಿ ವಿಮೆ ಕಂತು ಪಡೆಯಲು ತೊಂದರೆಯಾಗುತಿತ್ತು. ರೈತರ ಅನುಕೂಲಕ್ಕಾಗಿ ಇನ್ನು ಮುಂದೆ ವಿಮಾ ಕಂಪನಿಗಳು ಕಡ್ಡಾಯವಾಗಿ ನಾಮಿನಿಯನ್ನು ಮಾಡಿಸಿಕೊಳ್ಳುವಂತೆ ಸೂಚಿಸಿದರು.

ಅಲ್ಲದೇ, ಫಸಲ್ ಬೀಮಾ ಯೋಜನೆ ಮಾಡಿಸಿಕೊಳ್ಳುವ ವಿಮಾ ಕಂಪನಿಗಳು ಕೃಷಿ ಇಲಾಖೆಯಲ್ಲಿ ಕಚೇರಿ ಮಾಡಿಕೊಳ್ಳದೇ ಈ ಹಿಂದೆ ಸೂಚಿಸಿದಂತೆ ಪ್ರತಿ ತಾಲೂಕಿನಲ್ಲಿ ಪ್ರತ್ಯೇಕ ಕಚೇರಿ ತೆರೆಯಬೇಕು, ಕಚೇರಿ ತೆರೆದ ಲೊಕೇಷನ್ ಜಿಪಿಎಸ್ ಲಿಂಕ್ ನ್ನು ಕೃಷಿ ಇಲಾಖೆಗೆ ನೀಡಬೇಕು, ರೈತರು ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನೇ ಆಧಾರ್ ಕಾರ್ಡ್ ಗೆ ಜೋಡಿಸಿ ಆಧಾರ್ ಕಾರ್ಡ್ ನಲ್ಲಿರುವ ಚಾಲಿತ ಬ್ಯಾಂಕ್ ಖಾತೆಯನ್ನೇ ಬೆಳೆ ವಿಮೆಗೆ ದಾಖಲಿಸಬೇಕು ಎಂದರು.

ಕೆಲವೆಡೆ ಆಧಾರ್ ಕಾರ್ಡ್ ನ್ನು ಕುಟುಂಬದ ಸದಸ್ಯರು ಒಟ್ಟೊಟ್ಟಿಗೆ ಮಾಡಿಸುವಾಗ ಕೆಲವೆಡೆ ಬೆರಳಚ್ಚು ತಪ್ಪಾಗಿ ನಮೂದಾಗಿರುವ ತೊಂದರೆಯೂ ಸಹ ಆಧಾರ್ ಕಾರ್ಡ್ ನಲ್ಲಿ ಕಂಡುಬಂದಿದೆ. ಹೀಗಾಗಿ ಆಧಾರ್ ಕಾರ್ಡಿನಲ್ಲಿರುವ ತೊಂದರೆಗಳನ್ನು ರೈತರು ಕೂಡಲೇ ಸರಿಪಡಿಸಿಕೊಳ್ಳಬೇಕು, ಬೆಳೆ ವಿಮೆ ಬಗ್ಗೆ ಎಡಿಎ, ಜೆಡಿಎಗಳು ಸಹ ಸರಿಯಾಗಿ ಮಾಹಿತಿ ಪಡೆದು ತಮ್ಮನ್ನು ಸಂಪರ್ಕಿಸುವ ರೈತರಿಗೆ ಸಂಪೂರ್ಣ ಮಾಹಿತಿ ನೀಡಬೇಕೆಂದು ಬಿ.ಸಿ. ಪಾಟೀಲ್ ಸಭೆಯಲ್ಲಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT